ಪ್ರಜಾಪ್ರಭುತ್ವದ ಭದ್ರತೆಗೆ ಎಲ್ಲರೂ ಮತ ಚಲಾಯಿಸಿ
ಅರಸೀಕೆರೆ: ಮತದಾನ ಮಾಡುವುದು ಪ್ರತಿಯೊಬ್ಬರ ಹಕ್ಕು ಹಾಗೂ ಕರ್ತವ್ಯವಾಗಿದ್ದು, ಪ್ರಜಾಪ್ರಭುತ್ವದ ಭದ್ರಬುನಾದಿಗೆ ಪ್ರತಿಯೊಬ್ಬರೂ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಬೇಕೆಂದು ತಾಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಮೂರ್ತಿ ಕರೆ ನೀಡಿದರು. ತಾಲೂಕು ಆಡಳಿತದ ವತಿಯಿಂದ ಸಾರ್ವಜನಿಕರಿಗಾಗಿ ಮತದಾನದ ಅರಿವು ಕುರಿತು ಜಾಗೃತಿ ಜಾಥಾ ನಡೆಸಲಾಯಿತು. ಪಟ್ಟಣದ ತಾಲೂಕು ಕಚೇರಿ ಆವರಣದಿಂದ ಕಂತೇನಹಳ್ಳಿ ಬಡಾವಣೆಯವರೆಗೆ ಜಾಥಾ ನಡೆಯಿತು. ಜಾಥಾದಲ್ಲಿ ಪುರಸಭಾ ಮುಖ್ಯಾಧಿಕಾರಿ ಸತ್ಯನಾರಾಯಣ, ತಾಲ್ಲೂಕು ಸಮಾಜ ಕಲ್ಯಾಣಾಇಲಾಖೆಯ ರಾಜೇಂದ್ರ, ಕಾಶೀನಾಥ್ ಇನ್ನಿತರ ಅಧಿಕಾರಿಗಳು ಇದ್ದರು.
ಅಸಮಾಧಾನ: ಈ ಕಾರ್ಯಕ್ರಮಕ್ಕೆ ಕೆಲವು ಅಧಿಕಾರಿಗಳು ಗೈರು ಹಾಜರಾಗಿದ್ದು ನಾಗರಿಕರ ಅಸಮಾಧಾನಕ್ಕೆ ಕಾರಣವಾಗಿತ್ತು.