ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಪ್ರತಿಭೆ ಇಲ್ಲದ ಯಾವ ಮನುಷ್ಯನೂ ಇಲ್ಲ

Rashmi Kasaragodu
Updated On : 30 Mar 2014, 1:56 am

ಹಾಸನ: ಪ್ರತಿಭೆ ಇಲ್ಲದೆ ಯಾವ ಮನುಷ್ಯನು ಇರಲು ಸಾಧ್ಯವಿಲ್ಲ ಎಂದು ಶಿವಮೊಗ್ಗ ಪ್ರಾಧ್ಯಪಕ ಹಾಗೂ ಸಾಹಿತಿ ಶ್ರೀಕಂಠ ಕೂಡಿಗೆ ಅಭಿಪ್ರಾಯಪಟ್ಟರು. ನಗರದ ಸರ್ಕಾರಿ ಕಲಾ ಕಾಲೇಜ್ ಸಭಾಂಗಣದಲ್ಲಿ ಕನ್ನಡ ವಿಭಾಗ ಜಿಲ್ಲಾ ಪದವಿ ವಿದ್ಯಾರ್ಥಿಗಳ ಪ್ರಥಮ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಮಾರಂಭದಲ್ಲಿ ಸಾಹಿತಿ ಶ್ರೀಕಂಠ ಕೂಡಿಗೆಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸರ್ಕಾರಿ ಕಲಾ ಕಾಲೇಜ್ ಕನ್ನಡ ವಿಭಾಗದ ಮುಖ್ಯಸ್ಥ ಹಂಪನಹಳ್ಳಿ ತಿಮ್ಮೇಗೌಡ, ಸರ್ಕಾರಿ ಕಲಾ ಕಾಲೇಜ್ ಪ್ರಾಂಶುಪಾಲ ಡಾ. ಐ.ಎಮ್. ಮೋಹನ್, ಸರ್ಕಾರಿ ಮಹಿಳಾ ಕಾಲೇಜು ಪ್ರಾಂಶುಪಾಲರು ರೂಪ ರಾಜ್ ಚಂದನ್, ಸ್ನಾತಕೋತ್ತರ ವಿಭಾಗದ ಸಂಯೋಜಕ ಪ್ರೊ. ಡಿ.ಜಿ. ಕೃಷ್ಣೇಗೌಡ ಇದ್ದರು. ಕಾಲೇಜಿನ ಪ್ರಾಧ್ಯಪಕ ಟಿ.ಪಿ. ಪುಟ್ಟರಾಜ್ ಸ್ವಾಗತಿಸಿದರು. ಅರ್ಥಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಪ್ರಾರ್ಥಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement