'ಮಹಿಳೆ ಎಲ್ಲ ರಂಗದಲ್ಲಿಯೂ ಪುರುಷನಿಗೆ ಸರಿಸಮಾನ'
ಹೊಳೆನರಸೀಪುರ: ಮಹಿಳೆ ಇಂದು ಎಲ್ಲಾ ರಂಗದಲ್ಲಿಯೂ ಪುರುಷನ ಸರಿಸಮಾನವಾಗಿ ದುಡಿಯುತ್ತಿದ್ದಾಳೆ ಎಂದು ಪ್ರೇಮಾ ಮಹಿಳಾ ಸಮಾಜದ ಅಧ್ಯಕ್ಷೆ ಪ್ರೇಮಾ ಮಂಜುನಾಥ್ ನುಡಿದರು.
ಪಟ್ಟಣದಲ್ಲಿನ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಾತನಾಡಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಶಾಂತ, ಅಧ್ಯಕ್ಷತೆ ವಹಿಸಿದ್ದ ಸ.ಪ್ರ.ದ. ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಸವಣ್ಣ ಮಾತನಾಡಿದರು. ಇದೇ ಸಂದರ್ಭದಲ್ಲಿ ಲೇಖಕಿ ಪದ್ಮಾಮೂರ್ತಿ ಹಾಗೂ ಆಲೂರಿನ ಸಮಾಜ ಸೇವಕರಾದ ಷಾಹಿದಾ ಅಬ್ದುಲ್ ವಾಹಿದ್ ಇವರನ್ನು ಗೌರವಿಸಲಾಯಿತು. ಸಹಾಯಕ ಪ್ರಾಧ್ಯಾಪಕರಾದ ಶಿವರಾಮೇಗೌಡ ಸ್ವಾಗತಿಸಿದರು. ಮಹಿಳಾ ಸಮಾಜದ ಕಾರ್ಯದರ್ಶಿ ಪುಷ್ಪ ಮಲ್ಲೇಶ್ ವಂದಿಸಿದರು.