ಹಾಸನ ತಾಲೂಕು ಶಿಕ್ಷಕರ ಸಂಘದ ವಾರ್ಷಿಕ ಸಭೆ
ಹಾಸನ: ಹಾಸನ ತಾಲೂಕಿನ ಶಿಕ್ಷಕರ ಸಂಘದ ವಾರ್ಷಿಕ ಸಭೆ ಇತ್ತೀಚೆಗೆ ಸಂಘದ ಕಚೇರಿಯಲ್ಲಿ ನಡೆಯಿತು. ಸಭೆಯ ಅದ್ಯಕ್ಷತೆ ವಹಿಸಿದ್ದ ಅಣ್ಣಪ್ಪ ಮಾತನಾಡಿ, 2013-14ನೇ ಸಾಲಿನಲ್ಲಿ ಸಂಘದಿಂದ ಆಯೋಜಿಸಿದ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಸೆ. 8ರಂದು ಹಾಸನಾಂಬ ಕಲಾಕ್ಷೇತ್ರದಲ್ಲಿ ಕಾರ್ಯಕ್ರಮ ಏರ್ಪಡಿಸಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ಶಿಕ್ಷಕರಿಗೆ ಬಹುಮಾನ ವಿತರಿಸಲಾಗುವುದು ಎಂದರು. 2013-14ನೇ ಶೈಕ್ಷಣಿಕ ವರ್ಷದಲ್ಲಿ ಸಂಘದ ಚಟುವಟಿಕೆಗಳಿಗೆ ರು. 1.53 ಲಕ್ಷ ವೆಚ್ಚವಾಗಿದ್ದು, ಸಂಘದ ಸದಸ್ಯತ್ವದಿಂದ ರು. 46,480 ಬಂದಿದೆ ಎಂದರು.