ಅರಕಲಗೂಡಿನಲ್ಲಿ ಜಾಗೃತಿ
ಹಾಸನ: ಲೋಕಸಭಾ ಚುನಾವಣೆ 2014ರಂತೆ ಚುನಾವಣೆ ದಿನದಂದು ಮತದಾನದಲ್ಲಿ ಭಾಗವಹಿಸಿ ತಪ್ಪದೇ ಮತ ಚಲಾಯಿಸುವಂತೆ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಅರಕಲಗೂಡು ತಾಲೂಕು ಸ್ವೀಪ್ ಸಮಿತಿಯಿಂದ ಹಮ್ಮಿಕೊಳ್ಳಲಾಗಿದೆ. ತಾಲ್ಲೂಕಿನ ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತರು ಪೇಟೆಯ ಮುಖ್ಯ ಬೀದಿಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ, ಸಂತೆ, ಬಸ್ ನಿಲ್ದಾಣಗಳಲ್ಲಿ ಸಂಚರಿಸಿ ಮತದಾರರಲ್ಲಿ ಏ. 17ರಂದು ನಡೆಯುವ ಚುನಾವಣೆಯಲ್ಲಿ ಕಡ್ಡಾಯವಾಗಿ ಭಾಗವಹಿಸಿ ಮತದಾನ ಮಾಡುವಂತೆ ಮನವರಿಕೆ ಮಾಡಲಾಯಿತು ಎಂದು ತಾಲೂಕು ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಗಳು ತಿಳಿಸಿದ್ದಾರೆ.