ಸ್ವಯಂ ಪ್ರೇರಿತ ರಕ್ತದಾನ
ಅರಸೀಕೆರೆ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೆಡ್ ರಿಬ್ಬನ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಂಯುಕ್ತಾಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಸೈಯದ್ ಬಾಷ ಶಿಬಿರ ಉದ್ಘಾಟಿಸಿದರು. ಜೀವರಕ್ಷಕ ನಿಧಿ ಹಾಗೂ ತಾಂತ್ರಿಕ ಸಲಹೆಗಾರ ಜಿ.ಈ. ಮೋಹನ್ ರಕ್ತದಾನದ ಮಹತ್ವದ ಬಗ್ಗೆ ತಿಳಿಸಿದರು. ಜೆ.ಸಿ. ಆಸ್ಪತ್ರೆಯ ಐ.ಸಿ.ಟಿ.ಸಿ. ಕೌನ್ಸಿಲರ್ ಉಮಾ ವ್ಯಕ್ತಿಗೆ ತಗಲುವ ಮಾರಕ ರೋಗಗಳು ಮತ್ತು ರಕ್ತದಾನದ ಮಹತ್ವದ ಬಗ್ಗೆ ತಿಳಿಸಿದರು. ಎನ್.ಎಸ್.ಎಸ್. ಅಧಿಕಾರಿ ಕೆ.ಎಸ್. ವಿಶ್ವನಾಥ್ ಸ್ವಾಗತಿಸಿದರು. ಗ್ರಂಥಪಾಲಕ ಮಂಜುನಾಥ್ ಎಸ್. ವಂದಿಸಿದರು. ಹಲವು ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ಇದೇ ವೇಳೆ ರಕ್ತದ ಗುಂಪು ಪರೀಕ್ಷೆ ನಡೆಸಲಾಯಿತು.