ಗುಡಿಸಲಿಗೆ ಬೆಂಕಿ: ಸ್ಥಳಕ್ಕೆ ಎಸಿ ಭೇಟಿ
ಜಾವಗಲ್: ಜಿಲ್ಲಾ ಉಪ ವಿಭಾಗಾಧಿಕಾರಿ ಶರತ್ ಮತ್ತಿತರೆ ಅಧಿಕಾರಿಗಳು ಜಾವಗಲ್ ಖಲಂದರ್ ನಗರದ ಕೆಎಚ್‌ಬಿ ಬಡಾವಣೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ್ದ ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಭಸ್ಮವಾಗಿದ್ದ ಸ್ಥಳಕ್ಕೆ ಇತ್ತೀಚೆಗೆ ಭೇಟಿ ನೀಡಿ ಪರಿಶೀಲಿಸಿದರು.
ತಹಸೀಲ್ದಾರ್ ನಟರಾಜ್, ಉಪ ತಹಸೀಲ್ದಾರ್ ಪೆರುಮಾಳ್, ಕಂದಾಯಾಧಿಕಾರಿ ಮುದ್ದುವೀರಯ್ಯ ಇದ್ದರು.
ನಂತರ ದರ್ಗಾ, ಲಕ್ಷ್ಮೀನರಸಿಂಹಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ದೇಗುಲ ವೀಕ್ಷಿಸಿ ಜೀರ್ಣೋದ್ಧಾರ ಕಾಮಗಾರಿ ಪರಿಶೀಲಿಸಿದರು. ಸುದ್ದಿಗಾರರು ದೇಗುಲದ ಸುತ್ತಮುತ್ತ ಪ್ರವಾಸೋದ್ಯಮ ಇಲಾಖೆ ವತಿಯಿಂದ ಕೈಗೊಂಡಿರುವ ಕಾಂಕ್ರಿಟ್ ರಸ್ತೆ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಿರುವ ಬಗ್ಗೆ ಗಮನ ಹರಿಸಿದಾಗ, ಕೂಡಲೇ ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಕ್ರಮ ಕೈಗೊಳ್ಳಲು ತಹಶೀಲ್ದಾರ್‌ಗೆ ಸೂಚಿಸಿದರು.