ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಬಸ್ ದರ ಹೆಚ್ಚಳಕ್ಕೆ ಆಕ್ರೋಶ

Vishwanath S
Updated On : 7 May 2014, 12:05 pm

ಕನ್ನಡಪ್ರಭ ವಾರ್ತೆ, ಹಾಸನ, ಮೇ 6: ರಾಜ್ಯ ಸಾರಿಗೆ ಬಸ್ ಪ್ರಯಾಣದರ ಏರಿಕೆ, ಅನಿಯಮಿತ ವಿದ್ಯುತ್ ಕಡಿತಖಂಡಿಸಿ ಹಾಗೂ ಇತ್ತೀಚೆಗೆ ಚೆನ್ನೈನಲ್ಲಿ ನಡೆದ ರೈಲು ಬಾಂಬ್ ಸ್ಫೋಟದಲ್ಲಿ ಮೃತಪಟ್ಟ ಮಹಿಳೆಗೆ ಪರಿಹಾರ ನೀಡುವಂತೆ ಆಗ್ರಹಿಸಿ, ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಜಿಲ್ಲಾ ಯುವ ಮೋರ್ಚಾ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ನಗರದಲ್ಲಿ ಮೆರವಣಿಗೆ ನಡೆಸಿ ನಂತರ ಜಿಲ್ಲಾಧಿಕಾರಿ ಕಚೇರಿ ಬಂದು ಕೆಲ ಸಮಯ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ನೀಡಿದರು.
ಸರ್ಕಾರ ಬಸ್ ಪ್ರಯಾಣ ದರ ಆಗಾಗ ಏರಿಕೆ ಮಾಡಿಕೊಂಡು ಬರುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಪ್ರಸ್ತುತ ಸರ್ಕಾರ ಮತ್ತೆ ದರವನ್ನು ಏರಿಕೆ ಮಾಡಿರುವುದು ಜನವಿರೋಧಿ ತೀರ್ಮಾನ. ಯಾವುದೇ ಕಾರಣಕ್ಕೂ ದರ  ಏರಿಕೆ ಮಾಡಬಾರದು. ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಸಮರ್ಪಕ ವಿದ್ಯುತ್ ನೀಡಿ: ನಿರಂತರವಾದ ವಿದ್ಯುತ್ ಕಡಿತದಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯುತ್ ನಿಲುಗಡೆಯಿಂದಾಗಿ ಪರೀಕ್ಷೆಗಳಿಗೆ ಸಿದ್ಧಗೊಳ್ಳುವ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಆದ್ದರಿಂದ ಕೂಡಲೇ ಸರ್ಕಾರ ವಿದ್ಯುತ್ ಕಡಿತವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಆಗ್ರಹ: ಸರ್ಕಾರ ಒಬ್ಬೊಬ್ಬರಿಗೆ ಒಂದೊಂದು ರೀತಿಯಲ್ಲಿ ಪರಿಹಾರ ನೀಡಬಾರದು.
   ಆ ಮಹಿಳೆಯು ಬಾಂಬ್ ದುರಂತದಲ್ಲಿ ಸಾವನ್ನಪ್ಪಿರುವುದರಿಂದ ಆಕೆಯ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು. ತನ್ನದಲ್ಲದ ತಪ್ಪಿಗೆ ಮಹಿಳೆ ಪ್ರಾಣತೆತ್ತಿರುವುದರಿಂದ ಸರ್ಕಾರ ಸರಿಯಾಗಿ ಪರಿಹಾರ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.
ಖಂಡನೀಯ: ಬಸ್ ಪ್ರಯಾಣ ದರ ಏರಿಕೆ ಮತ್ತು ವಿದ್ಯುತ್ ಕಡಿತಗೊಳಿಸಿರುವ ಹಾಗೂ ಅಕ್ರಮವಾಗಿ ಗೋವುಗಳನ್ನು ಸಾಗಿಸುವ ಎಎನ್‌ಎಫ್ ಪೊಲೀಸರ ಗುಂಡಿನಿಂದ ಹತನಾದ ಕಬೀರ್ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿ ಅತ್ಯಂತ ಖಂಡಿನೀಯ ಎಂದು ಆರೋಪಿಸಿದರು.
ಎಚ್ಚರಿಕೆ: ಸರ್ಕಾರ ತನ್ನ ನಡವಳಿಕೆಯನ್ನು ಇದೇ ರೀತಿ ಮುಂದುವರೆಸಿದರೆ ಮುಂದಿನ ದಿನಗಳಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಬೃಹತ್ ಪ್ರತಿಭಟನೆ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
  ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ರೇಣುಕುಮಾರ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಚನ್ನಕೇಶವ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಎನ್. ನಾಗೇಶ್, ವಿಜಯಕುಮಾರ್, ಶ್ರೀನಿವಾಸ್ ಇದ್ದರು.
'ಇವರಿಗೂ ಪರಿಹಾರ ನೀಡಿ'
ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಬಾಂಬ್ ಸ್ಫೋಟದಿಂದ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ರು. 10 ಲಕ್ಷ ಪರಿಹಾರ ಸರ್ಕಾರ ಘೋಷಣೆ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ಗೋ ಕಳ್ಳನಿಗೆ ರು. 10 ಲಕ್ಷ ಪರಿಹಾರ ನೀಡಿದ್ದಾರೆ ಎಂದು ದೂರಿದ ಪ್ರತಿಭಟನಾಕಾರರು, ಬಾಂಬ್ ಸ್ಫೋಟದಲ್ಲಿ ಮೃತಪಟ್ಟ ಮಹಿಳೆಗೆ ಕೇವಲ ರು. 1 ಲಕ್ಷ ಮಾತ್ರ ಪರಿಹಾರ ನೀಡುತ್ತಿರುವುದು ನ್ಯಾಯ ಸಮ್ಮತವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement