ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಶಾಸ್ತ್ರೀಯ ಸ್ಥಾನ ಕೇವಲ ಆದೇಶವಷ್ಟೆ

Vishwanath S
Updated On : 7 May 2014, 12:05 pm

ಚನ್ನರಾಯಪಟ್ಟಣ: ಕನ್ನಡ ಭಾಷೆಗೆ ಕೇಂದ್ರ ಸರ್ಕಾರ ಶಾಸ್ತ್ರೀಯ ಸ್ಥಾನಮಾನವನ್ನು ಕೇವಲ ಆದೇಶದಲ್ಲಿ ನೀಡಿದ್ದು, ಅದನ್ನು ಜಾರಿಗೆ ತರಲು ಅವಕಾಶ ನೀಡಿಲ್ಲ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು.
ಜ್ಞಾನಸಾಗರ ವಿದ್ಯಾಸಂಸ್ಥೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಏರ್ಪಡಿಸಿದ್ದ  ಸಾಹಿತ್ಯ ಪರಿಷತ್‌ನ ಶತಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ ಎರಡು ಸಾವಿರ ವರ್ಷ ಇತಿಹಾಸವುಳ್ಳ ಕನ್ನಡ ಭಾಷೆಗೆ ಕೇಂದ್ರ ಸರ್ಕಾರ ಶಾಸ್ತ್ರೀಯ ಸ್ಧಾನಮಾನವನ್ನು ನೀಡಿದ್ದು, ಆದರೆ ಅದರ ಅನುಗುಣವಾಗಿ ಅನುದಾನ ನೀಡದಿರುವುದು ವಿಷಾದನೀಯ ಎಂದು ತಿಳಿಸಿದರು.
ಕೇಂದ್ರ ಸರ್ಕಾರ ಶಾಸ್ತ್ರೀಯ ಸ್ಥಾನಮಾನ ನೀಡಿ ಹಣಕಾಸು ನೆರವಿಗಾಗಿ ಹಿನ್ನಡೆ ತೋರುತ್ತಿರುವುದರಿಂದ ಕನ್ನಡ ಸಾಹಿತ್ಯವನ್ನು ಉಳಿಸಿ ಬೆಳಸಲು ಹೋರಾಟ ಮಾಡಿ ಸರ್ಕಾರದಿಂದ ಪಡೆಯುವ ಸ್ಥಿತಿಯನ್ನು ನಿರ್ಮಾಣ ಮಾಡದೆ ಕೇಂದ್ರ ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು ಎಂದು ತಿಳಿಸಿದರು.
ಜನತೆ ಮುಂದಿನ ಬದುಕಿಗಾಗಿ ಇಂಗ್ಲಿಷ್ ಭಾಷೆ ಅಗತ್ಯವಾಗಿದೆ. ಆದರೆ ಮಾತೃ ಭಾಷೆಯನ್ನು ಕಡೆಗಣಿಸಬಾರದು. ಪ್ರಾಥಮಿಕ ಶಿಕ್ಷಣ ಮಾತೃಭಾಷೆಯಲ್ಲಿಯೇ ಆಗಬೇಕು. ಮಾತೃ ಭಾಷೆಗೆ ದಕ್ಕೆಯಾಗದಂತೆ ನೋಡಿಕೊಳ್ಳುವುದು ತಮ್ಮ ಕರ್ತವ್ಯ ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಸಾಹಿತ್ಯ ಸಮ್ಮೇಳನಗಳನ್ನು ನೆರವೇರಿಸುವ ಮುಖೇನ ಸಮಾಜದ ಮುಖ್ಯವಾಹಿನಿಗೆ ಗುರುತಿಸಿಕೊಂಡಿದ್ದು, ಸಾಹಿತ್ಯ ಸಮ್ಮೇಳನಗಳು ಹೋಬಳಿ ಮಟ್ಟದಲ್ಲಿಯೂ ನಡೆದರೆ ಭಾಷೆ, ಸಾಹಿತ್ಯ ಉಳಿಯಲು ಬುನಾದಿಯಾಗುತ್ತದೆ ಎಂದು ತಿಳಿಸಿದರು.
ನಿವೇಶನ ಭರವಸೆ: ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಹಿಂದಿನಿಂದಲೂ ಗುರುತರ ಸಾಹಿತ್ಯಾತ್ಮಕ ಕಾರ್ಯಕ್ರಮಗಳನ್ನು ರೂಪಿಸುತ್ತಾ ಬಂದಿದ್ದು, ಪರಿಷತ್ ರೂಪಿಸುವ ಕಾರ್ಯಕ್ರಮಗಳನ್ನು ನೆರವೇರಿಸಲು ತನ್ನದೇ ಆದ ಕಟ್ಟಡ ಹೊಂದಬೇಕೆಂಬ ಆಸೆ ತಮ್ಮದಾಗಿದೆ ಎಂದ ಬಾಲಕೃಷ್ಣ, ಈ ನಿಟ್ಟಿನಲ್ಲಿ ಚುನಾವಣಾ ನೀತಿ ಸಂಹಿತೆಯ ಸಡಿಲಗೊಂಡ ನಂತರ ಅಗತ್ಯ ಸ್ಥಳದಲ್ಲಿ ನಿವೇಶನ ನೀಡಲಾಗುವುದು ಎಂದು ತಿಳಿಸಿದರು.
ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎನ್. ಲೋಕೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ತಹಸೀಲ್ದಾರ್ ಕೆ. ಕೃಷ್ಣ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ್ ಕುಮಾರ್ ಪರಿಸರ ಪ್ರೇಮಿ ಚ.ನಂ ಅಶೋಕ್,  ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಡಾ.ನಾಗೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement