ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರು ಪೊಲೀಸರ ವಶಕ್ಕೆ

Rashmi Kasaragodu
Updated On : 8 May 2014, 1:15 am

ಅರಸೀಕೆರೆ: ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರು ಹಾಗೂ ವಾಹನವನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸುವಲ್ಲಿ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಪಿಎಸ್ಐ ಸುನೀಲ್ ನೇತೃತ್ವದ ತಂಡ ಪಟ್ಟಣದ ಹೊರವಲಯದಲ್ಲಿರುವ ಕಸ್ತೂರಬಾ ಟ್ರಸ್ಟ್ ಸಮೀಪ ವಾಹನಗಳನ್ನು ತಡೆದು ಪರಶೀಲನೆ ನಡೆಸಿದಾಗ ಜಾನುವಾರುಗಳನ್ನು ಕಸಾಯಿಖಾನೆಗೆ ಕೊಂಡೊಯ್ಯುತ್ತಿರುವ ಅಂಶ ಬೆಳಕಿಗೆ ಬಂದಿತು. 1 ಹಸು, 7 ಕರು, 4 ಎಮ್ಮೆ ಹಾಗೂ ವಾಹನವನ್ನು ವಶಪಡಿಸಿಕೊಂಡು ಪ್ಯಾರು ಹಾಗೂ ಅಲ್ಲಬಕ್ಷ್ ಎಂಬುವರನ್ನು ಬಂಧಿಸಿ ಪ್ರಕರಣ ದಾಖಲಿಸಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.



ಬಾವಿಗೆ ಬಿದ್ದು ಗೃಹಿಣಿ ಆತ್ಮಹತ್ಯೆ


ಆಲೂರು: ಗೃಹಿಣಿಯೊಬ್ಬರು ಬಾವಿಗೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬಳೆರಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಧರಣಿ ಎಂಬವರ ಪತ್ನಿ ಶೋಭ (40) ಅತ್ಮಹತ್ಯೆ ಮಾಡಿಕೊಂಡು ಗೃಹಿಣಿಯಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಆಲೂರು ಪೊಲೀಸರು ಪ್ರಕರಣಿ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement