ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ದೇಗುಲ ಜೀರ್ಣೋದ್ಧಾರಕ್ಕೆ ಧರ್ಮಸ್ಥಳದಿಂದ ದೇಣಿಗೆ

Rashmi Kasaragodu
Updated On : 8 May 2014, 1:14 am

ಅರಸೀಕೆರೆ: ತಾಲೂಕಿನ ಸಂಕೋಡನಹಳ್ಳಿ ಗ್ರಾಮದ ಪುರಾಣ ಪ್ರಸಿದ್ಧ ಹಾಗೂ ಪುರಾತನ ರಂಗನಾಥ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾಮಗಾರಿ ಕೈಗೆತ್ತಿಕೊಳ್ಳಲು ಧರ್ಮಸ್ಥಳದ ಕ್ಷೇತ್ರದ ವತಿಯಿಂದ ದೇವಾಲಯ ಸಮಿತಿಗೆ 1 ಲಕ್ಷ ದೇಣಿಗೆಯನ್ನು ನೀಡಲಾಯಿತು.
ದೇವಾಲಯದ ಸಮಿತಿ ಸದಸ್ಯರಿಗೆ  ತಾಲೂಕಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಯೋಜನಾಧಿಕಾರಿ ಚನ್ನಪ್ಪಗೌಡ ದೇಣಿಗೆ ನೀಡಿ ಮಾತನಾಡಿ, ವೀರೇಂದ್ರ ಹೆಗ್ಗಡೆಯವರು ಪುರಾತನ ದೇವಾಲಯಗಳ ಸಂರಕ್ಷಣೆ ಮಾಡುವ ಉದ್ದೇಶದಿಂದ ಅನುದಾನ ನೀಡಲಾಗುತ್ತಿದೆ. ಗ್ರಾಮದ ದೇವಾಲಯ ಸಮಿತಿ ಸದಸ್ಯರು ದೇಣಿಗೆ ನೀಡುವಂತೆ ಮನವಿ ಮಾಡಿದ್ದ ಹಿನ್ನಲೆಯಲ್ಲಿ 1 ಲಕ್ಷ ಅನುದಾನದ ಚೆಕ್ಕನ್ನು ನೀಡಲಾಗುತ್ತಿದ್ದು ಧರ್ಮಸ್ಥಳ ಸ್ವಸಹಾಯ ಸಂಘದ ವತಿಯಿಂದ ಹಲವು ಗ್ರಾಮಗಳಲ್ಲಿ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಸಂಘದ ಕಸಬಾ  ಹೋಬಳಿ ಮೇಲ್ವಿಚಾರಕಿ ಗೀತಾ, ದೇವಾಲಯ ಸಮಿತಿಯ ಅಧ್ಯಕ್ಷ ಎಸ್.ಟಿ. ಮಹಾಲಿಂಗಪ್ಪ, ಸದಸ್ಯರಾದ ಜಯಶಂಕರಪ್ಪ, ಸಣ್ಣೇಗೌಡ, ಗಂಗಾಧರಪ್ಪ, ರೇವಣಸಿದ್ದಪ್ಪ ಇದ್ದರು. ಅನುದಾನ ಕೊರತೆಯಿಂದ ದೇವಾಲಯದ ಜೀರ್ಣೋದ್ಧಾರ ಸ್ಥಗಿತಗೊಂಡಿದ್ದರ ಬಗ್ಗೆ ಸುದ್ದಿ ಪ್ರಕಟವಾಗಿದ್ದನ್ನು ಇಲ್ಲಿ ಸ್ಮರಿಸಬಹುದು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement