ಬಸ್ ಪ್ರಯಾಣ ದರ ಏರಿಕೆಗೆ ಖಂಡನೆ
ಹಾಸನ: ರಾಜ್ಯ ರಸ್ತೆ ಸಾರಿಗೆ ಬಸ್ ಪ್ರಯಾಣ ದರ ಏರಿಕೆ ತಕ್ಷಣ ಇಳಿಸುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಕಾರರು ನಗರದ ಹೊಸ ಬಸ್ ಬಸ್ ನಿಲ್ದಾಣದ ಮುಂದೆ ಕೆಲ ಸಮಯ ರಸ್ತೆ ತಡೆ ಮಾಡಿದರು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಅಧೀನದಲ್ಲಿರುವ ಸಾರಿಗೆ ಬಸ್ ಪ್ರಯಾಣ ದರವನ್ನು ತರಾತುರಿಯಲ್ಲಿ ಏರಿಸಲಾಗಿದೆ. ಜನ ಸಾಮಾನ್ಯರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಸಾರಿಗೆ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ. ಆದರೇ ಹಿಂದಿನ ಬಿಜೆಪಿ ಆಡಳಿತ ಮತ್ತು ಪ್ರಸ್ತುತ ಕಾಂಗ್ರೆಸ್ ಸರ್ಕಾರ ಪ್ರಯಾಣ ದರ ಹೆಚ್ಚಿಸಿರುವುದು ಖಂಡನೀಯ ಎಂದು ಆರೋಪಿಸಿದರು.
ಹೊಸ ಬಸ್ ನಿಲ್ದಾಣ ಬಳಿ ರಸ್ತೆ ತಡೆ ಮಾಡಿದ್ದರಿಂದ ಕೆಲ ಸಮಯ ಬಸ್ ಸಂಚಾರಕ್ಕೆ ಅಡಚಣೆ ಉಂಟಾಯಿತು. ಪ್ರತಿಭಟನೆಯಲ್ಲಿ ಸಂಘಟನೆಯ ಸೂಫಿ ಹಾಗೂ ಇತರರು ಇದ್ದರು.