ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಶಾಸಕ ರಮೇಶ್ ಕುಮಾರ್ ಹೇಳಿಕೆಗೆ ತೀವ್ರ ಖಂಡನೆ

Rashmi Kasaragodu
Updated On : 8 May 2014, 1:14 am

ಅರಸೀಕೆರೆ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ವಿರುದ್ಧ ಶ್ರೀನಿವಾಸಪುರ ಶಾಸಕ ರಮೇಶ್ ಕುಮಾರ್ ನೀಡಿರುವ ಹೇಳಿಕೆ ವಿರುದ್ಧ ತಾಲೂಕು ಸಂಘದ ನೌಕರರು ಪ್ರತಿಭಟನೆ ನಡೆಸಿದರು.
ಪಟ್ಟಣದ ಸೆಸ್ಕ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ನೌಕರರು ಶಾಸಕ ರಮೇಶ್ ಕುಮಾರ್ ವಿರುದ್ಧ ಧಿಕ್ಕಾರ ಕೂಗಿ, ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಕಾರ್ಯಪಾಲಕ ಎಂಜಿನಿಯರ್ ದೇವರಾಜ್ ಮಾತನಾಡಿ, ನೌಕರರು ತಮ್ಮ ಕರ್ತವ್ಯದ ವೇಳೆ ಪ್ರಾಣದ ಹಂಗನ್ನು ತೊರೆದು ಕಾರ್ಯ ನಿರ್ವಹಿಸುತ್ತಾರೆ. ಇಂತಹ ಸಂದರ್ಭದಲ್ಲಿ ಜನಪ್ರತಿನಿಧಿಯಾಗಿ ಪ್ರಚೋದಿಸಿರುವುದು ಅಪರಾಧವಾಗಿದ್ದು, ರಮೇಶ್ ಕುಮಾರ್ ನೌಕರರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ರವೀಂದ್ರಬಾಬು, ರಾಮಚಂದ್ರು, ಶ್ರೀನಿವಾಸ್, ಶಶಿಧರ್, ನಾಗೇಶ್, ರವಿ, ರಂಗಸ್ವಾಮಿ, ನಟರಾಜ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement