ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಜಿಲ್ಲೆಗೆ ಶೇ. 58 ಫಲಿತಾಂಶ

Rashmi Kasaragodu
Updated On : 8 May 2014, 11:51 am

ಕನ್ನಡಪ್ರಭ ವಾರ್ತೆ, ಹಾಸನ, ಮೇ 8
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಜಿಲ್ಲೆಗೆ ಶೇ. 58.66ರಷ್ಟು ಫಲಿತಾಂಶ ಲಭ್ಯವಾಗಿದೆ.
ಜಿಲ್ಲೆಯಲ್ಲಿ 17,766  ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ತೆಗೆದುಕೊಂಡಿದ್ದರು. ಈ ಪೈಕಿ 17,578 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, 10,312 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಈ ಪೈಕಿ 8005 ಬಾಲಕರು, 9, 573 ಬಾಲಕಿಯರು ಸೇರಿದಂತೆ ಒಟ್ಟು 17,578 ಮಂದಿ ಪರೀಕ್ಷೆ ತೆಗೆದುಕೊಂಡಿದ್ದರು. 14, 242 ವಿದ್ಯಾರ್ಥಿಗಳು ಇದೇ ಪ್ರಥಮ ಬಾರಿಗೆ ಪರೀಕ್ಷೆ ತೆಗೆದುಕೊಂಡಿದ್ದರು. 2210 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 1126 ಮಂದಿ ಖಾಸಗಿಯಾಗಿ ಪರೀಕ್ಷೆ ತೆಗೆದುಕೊಂಡಿದ್ದರು. ಜಿಲ್ಲೆಯಲ್ಲಿ ಒಟ್ಟು 37 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದವು.  
2013-14ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಕಳೆದ ಮಾ. 12ರಿಂದ ಮಾ. 27ರವರೆಗೆ ನಡೆದಿದ್ದವು. ಜಿಲ್ಲೆಯಲ್ಲಿ ಪರೀಕ್ಷೆಗೆ ಒಟ್ಟು 37 ಪರೀಕ್ಷಾ ಕೇಂದ್ರಗಳಲ್ಲಿ ಕಲಾ ವಿಭಾಗದಲ್ಲಿ 8166 ವಿದ್ಯಾರ್ಥಿಗಳ ಪೈಕಿ 4458 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 5085 ವಿದ್ಯಾರ್ಥಿಗಳ ಪೈಕಿ 3666 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ವಿಜ್ಞಾನ ವಿಭಾಗದಲ್ಲಿ 4327 ವಿದ್ಯಾರ್ಥಿಗಳ ಪೈಕಿ 2188 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
8005 ಬಾಲಕರ ಪೈಕಿ 4138 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 9,573 ವಿದ್ಯಾರ್ಥಿನಿಯರ ಪೈಕಿ 6174 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. 2210 ಪುನರಾವರ್ತಿತ ವಿದ್ಯಾರ್ಥಿಗಳ ಪೈಕಿ 679 ಮಂದ ಉತ್ತೀರ್ಣರಾಗಿದ್ದು, 1126 ಖಾಸಗಿ ಅಭ್ಯರ್ಥಿಗಳ ಪೈಕಿ 370 ಮಂದಿ ಉತ್ತೀರ್ಣರಾಗಿದ್ದಾರೆ. ಇದೇ ಪ್ರಥಮ ಬಾರಿಗೆ 14, 242 ಪರೀಕ್ಷೆ ಬರೆದ ವಿದ್ಯಾರ್ಥ್ಥಿಗಳ ಪೈಕಿ 9263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
12,758 ವಿದ್ಯಾರ್ಥಿಗಳು ನಗರದ ಪ್ರದೇಶದ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 7449 ಮಂದಿ ಉತ್ತೀರ್ಣರಾಗಿದ್ದಾರೆ. 4820 ಗ್ರಾಮೀಣ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 2863 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 17,578 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 10,312 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಜಿಲ್ಲೆಗೆ ಶೇ.58.66ರಷ್ಟು ಫಲಿತಾಂಶ ಲಭ್ಯವಾಗಿದೆ. ಶಾಂತಳಾ ಮಹಿಳಾ ಪದವಿ ಪೂರ್ವ ಕಾಲೇಜಿಗೆ ಶೇ. 84ರಷ್ಟು ಫಲಿತಾಂಶ ಶಾಂತಳಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ 2013-14ನೇ ಸಾಲಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 70 ವಿದ್ಯಾರ್ಥಿಗಳು ಹಾಜರಾಗಿದ್ದು, ಈ ಪೈಕಿ 59 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಕಾಲೇಜಿಗೆ ಶೇ. 84ರಷ್ಟು ಫಲಿತಾಂಶ ಲಭ್ಯವಾಗಿದೆ.
ಕಲಾ ವಿಭಾಗದಲ್ಲಿ 31 ವಿದ್ಯಾರ್ಥಿಗಳ ಪೈಕಿ 20 ಮಂದಿ ಪ್ರಥಮ ಶ್ರೇಣಿ, 6 ಮಂದಿ ದ್ವಿತೀಯ ಶ್ರೇಣಿ, 3 ಮಂದಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 39 ಮಂದಿ ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 1 ಅತ್ಯುನ್ನತ ಶ್ರೇಣಿ, 16 ಮಂದಿ ಪ್ರಥಮ ಶ್ರೇಣಿ, 11 ಮಂದಿ ದ್ವಿತೀಯ ಶ್ರೇಣಿ, 2 ಮಂದಿ ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪೂಜಾಶ್ರೀ ಎಂಬ ವಿದ್ಯಾರ್ಥಿ 510 ಅಂಕಗಳನ್ನು ಪಡೆದಿದ್ದು, ಎಸ್.ಎಂ. ರಮ್ಯ ಎಂಬ ವಿದ್ಯಾರ್ಥಿ 507 ಅಂಕಗಳನ್ನು ಪಡೆದಿದ್ದಾಳೆ.
ಕಲಾ ವಿಭಾಗದಲ್ಲಿ ಬಿ.ಎಸ್. ವನಜಾಕ್ಷಿ ಎಂಬ ವಿದ್ಯಾರ್ಥಿ 463 ಅಂಕಗಳನ್ನು ಪಡೆಯುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ ಎಂದು ಕಾಲೇಜಿ ಪ್ರಾಂಶುಪಾಲರು ತಿಳಿಸಿದ್ದಾರೆ.



ಸ್ವಪ್ನಾ ಜಿಲ್ಲೆಗೆ ಪ್ರಥಮ
ಇಲ್ಲಿನ ಮಾಸ್ಟರ್ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಎಸ್.ಪಿ. ಸ್ವಪ್ನಾ 600 ಅಂಕಗಳಿಗೆ 587 (ಶೇ. 97) ಅಂಕಗಳನ್ನು ಪಡೆಯುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದ ವಿಜಯನಗರ ಬಡಾವಣೆಯ ನಿವಾಸಿ ಸಂಗಮೇಶ್ ಎಂಬವರ ಪುತ್ರಿ ಸ್ವಪ್ನಾ ಅವರು ಯಾವುದೆ ಟ್ಯೂಶನ್‌ಗೆ ಹೋಗದೆ ಮನೆಯಲ್ಲಿ ಪ್ರತಿನಿತ್ಯ ನಾಲ್ಕರಿಂದ ಐದು ತಾಸುಗಳ ವ್ಯಾಸಂಗ ಮಾಡುತ್ತಿದ್ದರು. ಶೇ. 99ರಷ್ಟು ಅಂಕಗಳು ಬರುತ್ತದೆ ಎಂಬ ನಿರೀಕ್ಷೆಯನ್ನು ಹೊಂದಿದ್ದರು. ಇವರು ಬಿಇ ಮಾಡಿ ಎಂಜಿನಿಯರ್ ಆಗಬೇಕು ಎಂಬ ಕನಸನ್ನು ಹೊತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement