ಬಾಲಕಿ ನಾಪತ್ತೆ
ಹಾಸನ: ನಗರದ ವೈ.ಪಿ. ಉದಯಕುಮಾರ್ ಎಂಬುವರ ಅಕ್ಕನ ಮಗಳು ವೈ.ಕೆ. ಅಪೂರ್ವ (17) ನಗರದ ಪಿ.ಜಿ.ಯಲ್ಲಿದ್ದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಎ. ವ್ಯಾಸಂಗ ಮಾಡುತ್ತಿದ್ದಳು. ಈಕೆ ಏ. 30ರಿಂದ ಕಾಣೆಯಾಗಿದ್ದಾಳೆ. 5.3 ಅಡಿ ಎತ್ತರ, ಎಣ್ಣೆಗೆಂಪು ಬಣ್ಣ, ದುಂಡು ಮುಖ, ತೆಳ್ಳನೆಯ ಮೈಕಟ್ಟು, ಕನ್ನಡ ಮಾತನಾಡುತ್ತಾಳೆ. ಹಸಿರು ಬಣ್ಣದ ಹಾಗೂ ಕೆಂಪು ಬಣ್ಣದ ಚೂಡಿದಾರ್ ಧರಿಸಿರುತ್ತಾಳೆ. ಈ ಬಗ್ಗೆ ಮಾಹಿತಿ ಸಿಕ್ಕಲ್ಲಿ ಹಾಸನ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ 08172-268845 ಅಥವಾ ಹಾಸನ ಬಡಾವಣೆ ಪೊಲೀಸ್ ಠಾಣೆ ದೂರವಾಣಿ 08172-268967 ಇವರನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಹಾಸನ ನಗರ ಬಡಾವಣೆ ಪೊಲೀಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕರು ಕೋರಿದ್ದಾರೆ.