ಕೌನ್ಸೆಲಿಂಗ್ ಶುರು
ಹಾಸನ: 2014-15 ಸಾಲಿಗೆ ಜಿಲ್ಲೆಯಲ್ಲಿನ ಮುರಾರ್ಜಿ ದೇಸಾಯಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಿಗೆ ವಿದ್ಯಾರ್ಥಿಗಳ ಪ್ರವೇಶಾತಿಗೆ ಶುಕ್ರವಾರ ಕೌನ್ಸೆಲಿಂಗ್ ಮೂಲಕ ಸ್ಥಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ ಹಾಗೂ ಕ್ರೈಸ್ಟ್ ಸಂಸ್ಥೆ ವತಿಯಿಂದ ನಗರದ ಅಂಬೇಡ್ಕರ್ ಭವನ ಸಭಾಂಗಣದಲ್ಲಿ ಈ ಪ್ರಕ್ರಿಯೆ ನಡೆಸಲಾಗುತ್ತಿದೆ. ಶುಕ್ರವಾರ ವಿಶೇಷ ವರ್ಗದ ಹಾಗೂ ಪ್ರವರ್ಗ 1ರ 2ಎ ಗೆ ಸೇರಿದ 287 ಖಾಲಿ ಸೀಟುಗಳಿಗೆ ಕೌನ್ಸಿಲಿಂಗ್ ಮೂಲಕ ಭರ್ತಿ ಪ್ರಕ್ರಿಯೆ ನಡೆಸಲಾಯಿತು ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪುರುಷೋತ್ತಮ ತಿಳಿಸಿದ್ದಾರೆ.