ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಮೊರಾರ್ಜಿ, ಚನ್ನಮ್ಮ ಶಾಲೆಗಳಿಗೆ ಕೌನ್ಸೆಲಿಂಗ್

Rashmi Kasaragodu
Updated On : 9 May 2014, 11:20 am

ಹಾಸನ: ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗಳಿಗೆ ಪ್ರಸಕ್ತ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ರ್ಯಾಂಕಿಂಗ್ ಆಧಾರದ ಮೇಲೆ ಶುಕ್ರವಾರ ಕೌನ್ಸೆಲಿಂಗ್ ನಡೆಯಿತು.
ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ 6ನೇ ತರಗತಿ ಮಕ್ಕಳ ಪ್ರವೇಶಕ್ಕಾಗಿ ಕೌನ್ಸೆಲಿಂಗ್ ನಡೆಸಿತು.
 ನೂರಾರು ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗಳ ಪ್ರವೇಶಕ್ಕಾಗಿ ಕಾದು ನಿಂತಿದ್ದರು.
ಪರೀಕ್ಷೆ ಫಲಿತಾಂಶದ ಪ್ರವರ್ಗವಾರು ರ್ಯಾಂಕಿಂಗ್ ಆಧಾರದ ಮೇಲೆ ಅಭ್ಯರ್ಥಿಗಳ ಮೂಲ ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ, ಅಂಗವಿಕಲರ ಮತ್ತು ದುರ್ಬಲ ವರ್ಗದ ಪ್ರಮಾಣ ಪತ್ರದೊಂದಿಗೆ ಮಕ್ಕಳೊಂದಿಗೆ ಪೋಷಕರು ಹಾಜರಾಗಿದ್ದರು.
ಬೆಳಗಿನಿಂದಲೇ ಪೋಷಕರು ತಮ್ಮ ಮಕ್ಕಳ ಜೊತೆ ಸರದಿ ಸಾಲಿನಲ್ಲಿ ನಿಂತು ಕೌನ್ಸೆಲಿಂಗ್ನಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣಾಧಿಕಾರಿ ಪುರುಷೋತ್ತಮ್ ಹಾಗೂ ಜಗದೀಶ್ ಇವರು ಅರ್ಹ ಮಕ್ಕಳಿಗೆ ಶಾಲೆಗೆ ಸೇರಲು ಅರ್ಹತಾ ಪತ್ರ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement