ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಎವಿಕೆ ಕಾಲೇಜು ವಿದ್ಯಾರ್ಥಿನಿಯರ ಸಾಧನೆ

Rashmi Kasaragodu
Updated On : 13 May 2014, 2:00 am

ಹಾಸನ: ನಗರದ ಎವಿಕೆ ಪದವಿ ಪೂರ್ವ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರಾದ ದೀಕ್ಷಾಭಟ್ ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ 580 ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು, ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು (ಪ್ರಥಮ)ನಲ್ಲಿ ಉಪನ್ಯಾಸಕರಾಗಿರುವ ಪರಮೇಶ್ವರ ವಿ. ಭಟ್ ಹಾಗೂ ಅರ್ಚನಾ ಭಟ್ ಅವರ ಪುತ್ರಿ. ಕಾಲೇಜಿನ ಮತ್ತೋರ್ವ ವಿದ್ಯಾರ್ಥಿನಿ ರಶ್ಮಿ ರವೀಂದ್ರ ಥಿಟೆ, ಒಟ್ಟು 576 ಅಂಕ ಗಳಿಸಿ, ಜಿಲ್ಲೆಗೆ ತೃತೀಯ ಸ್ಥಾನ ಗಳಿಸಿದ್ದಾರೆ. ರಶ್ಮಿ ತಂದೆ ರವೀಂದ್ರ ಥಿಟೆ ಅವರು ಬ್ಯಾಂಕ್ ಆಫ್ ಇಂಡಿಯಾದಲ್ಲಿ ಹಿರಿಯ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಅಭಿನಂದನೆ: ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿಯ ಅಧ್ಯಕ್ಷ ಅಶೋಕ್ ಹಾರನಹಳ್ಳಿ, ಉಪಾಧ್ಯಕ್ಷ ಜಿ.ಟಿ. ಕುಮಾರ್, ಕಾರ್ಯದರ್ಶಿ ಆರ್.ಟಿ. ದ್ಯಾವೇಗೌಡ ಹಾಗೂ ಖಜಾಂಚಿ ಆರ್. ಶೇಷಗಿರಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಇಬ್ಬರೂ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ್ದಾರೆ.
ಉಪನ್ಯಾಸ ಕಾರ್ಯಕ್ರಮ ಇಂದು
ಹಾಸನ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ಉಪನ್ಯಾಸ ಮಾಲಿಕೆಯಲ್ಲಿ  ಶ್ರವಣ ಬೆಳಗೊಳ ಗೊಮಟೇಶ್ವರ ಸಹಸ್ರಾಬ್ದಿ ದತ್ತಿ ಉಪನ್ಯಾಸ ಕಾರ್ಯಕ್ರಮ ನಗರದ ಶ್ರೀರಂಗ ಶಿಕ್ಷಣ  ಮಹಾವಿದ್ಯಾಲಯದಲ್ಲಿ ಮೇ 13 ಅಪರಾಹ್ನ 2.30ಕ್ಕೆ ಏರ್ಪಡಿಸಲಾಗಿದೆ.
ಶ್ರೀರಂಗ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಂಶುಪಾಲ ನವೀನ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಕ.ಸಾ.ಪ ಅಧ್ಯಕ್ಷ ಎಚ್.ಎಲ್. ಜನಾರ್ಧನ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಕನ್ನಡ ಸಾಹಿತ್ಯಕ್ಕೆ ಜೈನ ಸಾಹಿತಿಗಳ ಕೊಡುಗೆ ವಿಷಯ ಕುರಿತಂತೆ ಮೊಸಳೆ ಹೊಸಳ್ಳಿ   ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಡಿ. ಶ್ರೀನಿವಾಸ್ ಉಪನ್ಯಾಸ ನೀಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಗೊರೂರು ಶಿವೇಶ್ ಆಶಯ ನುಡಿಗಳನ್ನಾಡಲಿದ್ದು ಪರಿಷತ್ತಿನ ಪದಾಧಿಕಾರಿಗಳಾದ ಹರೀಶ್ ಸಿ.ಕೆ, ರಮೇಶ್ ಎಸ್.ಡಿ. ಮತ್ತು ಸಿ.ಕೆ. ಮಮತೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement