ಕೃಷಿ ಸಚಿವ ಕೃಷ್ಣ ಭೈರೇಗೌಡ ಕಾರ್ಯಕ್ರಮ ಇಂದು
ಹಾಸನ: ಕೃಷಿ ರಾಜ್ಯ ಸಚಿವ ಕೃಷ್ಣ ಬೈರೇಗೌಡ ಮೇ 13ರಂದು ಬೆಳಗ್ಗೆ 8.30ರಿಂದ ಮಧ್ಯಾಹ್ನ 1.30ರವರೆಗೆ ಇಲಾಖೆಯ ಹಾಗೂ ಕರ್ನಾಟಕ ರಾಜ್ಯ ಬೀಜ ನಿಗಮ ಕ್ಷೇತ್ರ ತಪಾಸಣೆ ಮಾಡುವರು. ಸಚಿವರು ಮಧ್ಯಾಹ್ನ 2.30ಕ್ಕೆ ಜಿಲ್ಲಾ ಪಂಚಾಯ್ತಿ ಹೊಯ್ಸಳ ಸಭಾಂಗಣದಲ್ಲಿ ಹಾಸನ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಸಭೆಯಲ್ಲಿ ಜಿಲ್ಲಾಧಿಕಾರ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಂಟಿ ಕೃಷಿ ನಿರ್ದೇಶಕರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸುವರು.