'ಗುರಿ ಸಾಧಿಸಲು ಕಠಿಣ ಪರಿಶ್ರಮ ಅಗತ್ಯ'
ಹೊಳೆನರಸೀಪುರ: ವಿದ್ಯಾರ್ಥಿಗಳು ತಮ್ಮ ಗುರಿ ಸಾಧಿಸಲು ಶಿಸ್ತು, ಸಮಯಪ್ರಜ್ಞೆ ಮತ್ತು ಕಠಿಣ ಪರಿಶ್ರಮವನ್ನು ತಮ್ಮ ದೈನಂದಿನ ಓದಿನ ಜತೆ ಆಳವಡಿಸಿಕೊಂಡು ಉತ್ತಮ ನಾಗರೀಕರಾಗಬೇಕೆಂದು ಎಂದು ಬೇಲೂರಿನ ವೈ.ಡಿ.ಡಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಿ.ಎಸ್. ರಾಜು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ತಾಲೂಕಿನ ಪಡುವಲಹಿಪ್ಪೆಯ ಎಚ್.ಡಿ. ದೇವೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಮನುಷ್ಯನಾದವನು ಸುಸಂಸ್ಕತನಾಗಿ ಉತ್ತಮ ನಾಗರೀಕನಾಗಿ ಬಾಳಲು ಶಿಕ್ಷಣ ಅತಿ ಪ್ರಮುಖ ಘಟ್ಟ ಎಂದು ಹೇಳಿದರು.
ಕರೆ: ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಡಿ. ನಾರಾಯಣ ಮಾತನಾಡಿ, ವಿದ್ಯಾರ್ಥಿಗಳು ಸರ್ಕಾರದಿಂದ ನೀಡಲಾಗುತ್ತಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ಜ್ಞಾನ ಹೆಚ್ಚಿಸಿಕೊಳ್ಳಲು ಕರೆ ನೀಡಿದರು.
ದಾಖಲಾತಿ ಬಗ್ಗೆ ಸಂತಸ: ಗ್ರಾಮಾಂತರ ಪ್ರದೇಶದಲ್ಲಿರುವ ನಮ್ಮ ಕಾಲೇಜು ಉತ್ತಮ ಶಿಕ್ಷಣ ನೀಡಲಾಗುತ್ತಿದ್ದು ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಹಾಸನದ ಸರ್ಕಾರಿ ಕಲಾಛಕಾಲೇಜಿನ ಸ್ನಾತಕೋತ್ತರ ವಿಭಾಗದ ಅರ್ಥಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ವೈ.ಡಿ. ರತ್ನ ಮತ್ತು ಹಾಸನ ಸರ್ಕಾರಿ ವಿಜ್ಞಾನ ಕಾಲೇಜಿನ ಗಣಿತಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಆರ್.ಡಿ. ಜಗದೀಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಾಲೇಜಿನ ಸಾಂಸ್ಕೃತಿಕ ವೇದಿಕೆ ಸಂಚಾಲಕ ಎನ್.ಟಿ.ಶ್ರೀನಿವಾಸ ಮತ್ತು ಕ್ರೀಡಾ ವಿಭಾಗದ ನಿರ್ದೇಶಕ ಜಿ.ಪಿ. ಯೋಗೇಶ ಇದ್ದರು.
ಇದೇ ಸಂದರ್ಭದಲ್ಲಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ವಿದ್ಯಾರ್ಥಿ ಸುನಿಲ್ ಕುಮಾರ್ ಪ್ರಾರ್ಥಿಸಿದರು. ಕನ್ನಡ ಸಹಾಯಕ ಪ್ರಾಧ್ಯಾಪಕ ಬಿ.ಎಚ್. ಶ್ರೀನಿವಾಸ ಸ್ವಾಗತಿಸಿದರು.
ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಮುನಿರಾಜು ರವರು ವಂದಿಸಿದರು.
ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಕೆ.ವಿ. ಪಾರ್ಥೇಶ್ ಕಾರ್ಯಕ್ರಮ ನಿರೂಪಿಸಿದರು.