ಜಿಲ್ಲೆಗೆ ಶೇ. 85.54 ಫಲಿತಾಂಶ
ಹಾಸನ: ಎಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಜಿಲ್ಲೆಯು 14ನೇ ಸ್ಥಾನವನ್ನು ಪಡೆಯುವ ಮೂಲಕ ಜಿಲ್ಲೆಯು ಶೇ. 85.54ರಷ್ಟು ಫಲಿತಾಂಶ ಲಭ್ಯವಾಗಿದೆ.
ಜಿಲ್ಲೆಯಲ್ಲಿ ನಡೆದಂತಹ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಒಟ್ಟಾರೆ 24,800 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 21,213 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಜಿಲ್ಲೆಗೆ ಶೇ. 85.54ರಷ್ಟು ಫಲಿತಾಂಶ ಲಭ್ಯವಾಗಿದೆ. ಹಾಸನದ ಜಾವಗಲ್ನ ಮಾಡಲ್ ಆಂಗ್ಲ ಪ್ರೌಢ ಶಾಲೆಯಲ್ಲಿ 33 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ 16 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 17 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಾದ ಕೆ.ಸಿ. ಜೀವನ್ 592 ಅಂಕ, ಜಿ.ಆರ್. ಅಮಿತ್ 578 ಅಂಕ, ಎಸ್.ಎನ್. ವಿದ್ಯಾ 575 ಅಂಕ, ಕುಮುದ 563 ಅಂಕ ಗಳಿಸಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಡಾ. ವಿನಾಯಕ್ ತಿಳಿಸಿದ್ದಾರೆ. ಎಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ವೆಬ್ಸೈಟ್ನಲ್ಲಿ ಪ್ರಕಟಗೊಳ್ಳುತ್ತಿದ್ದಂತೆ ಪಟ್ಟಣದ ಪ್ರಮುಖ ಸೈಬರ್ ಕೇಂದ್ರಗಳ ಮುಂದೆ ಜಮಾಯಿಸಿದ ವಿದ್ಯಾರ್ಥಿಗಳು ಫಲಿತಾಂಶ ತಿಳಿದುಕೊಳ್ಳುತ್ತಿದ್ದ ದೃಶ್ಯ ಕಂಡುಬಂದಿತು.