ಯುನೈಟೆಡ್ ಶಾಲೆಗೆ ಶೇ. 100 ಫಲಿತಾಂಶ
ಬೇಲೂರು: ಪಟ್ಟಣದ ಮೂಡಿಗೆರೆ ರಸ್ತೆಯಲ್ಲಿ ಇರುವ ನಿಡಗೋಡು ಯುನೈಟೆಡ್ ಅಕಾಡೆಮಿ ಆಂಗ್ಲ ಮಾಧ್ಯಮ ಶಾಲೆಯು ಪ್ರತಿವರ್ಷದಂತೆ ಈ ಬಾರಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದ ಸಾಧನೆ ಮಾಡಿದೆ.
ಯುನೈಟೆಡ್ ಅಕಾಡೆಮಿ ಆಂಗ್ಲ ಮಾಧ್ಯಮ ಶಾಲೆಯ 27 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸಿದ್ದು 27 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 5 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಅಂಕವನ್ನು ಗಳಿಸಿದ್ದು, ಹೇಮಂತ್ - 589, ಮನೋಜ್ - 575, ಕಾರ್ತಿಕ್- 548, ಕಿರಣ್- 535, ಸಂಜು - 532 ಅಂಕವನ್ನು ಗಳಿಸಿದ್ದಾರೆ. 19 ಪ್ರಥಮ ಶ್ರೇಣಿ, 3 ಮಂದಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಇದೇ ಸಂದರ್ಭದಲ್ಲಿ ಗುರುಕುಲ ಟ್ರಸ್ಟ್ನ ಕಾರ್ಯದರ್ಶಿ ವಿ.ಎಸ್. ಭೋಜೇಗೌಡರು ಮಾತನಾಡಿ, ನಮ್ಮ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾದಗಿನಿಂದ ಇದುವರೆಗೆ ಶೇ. 100 ಅಂಕ ಗಳಿಸುತ್ತಿದೆ. ಪ್ರತಿ ವರ್ಷ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾದ ಇಬ್ಬರು ವಿದ್ಯಾರ್ಥಿಗಳಿಗೆ 10 ಮತ್ತು 5 ಸಾವಿರ ರು.ಪ್ರೋತ್ಸಾಹ ಬಹುಮಾನವನ್ನು ನೀಡುತ್ತಾ ಬಂದಿದ್ದು, ಈ ಬಾರಿಯೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ನೀಡಿ ಸನ್ಮಾನಿಸಲಾಗುವುದು ಎಂದರು.