ಮತ ಎಣಿಕೆಗೆ ಅಂತಿಮ ಹಂತದ ಸಿದ್ಧತೆ ಚುರುಕು
ಹಾಸನ: ಲೋಕಸಭಾ ಚುನಾವಣೆ ಮತ ಎಣಿಕೆ ದಿನ ಸಮೀಪಿಸುತ್ತಿರುವುದರಿಂದ ಜಿಲ್ಲಾಡಳಿತ ಅದಕ್ಕಾಗಿ ಅಂತಿಮ ಹಂತದ ಸಿದ್ಧತೆಗಳು ಚುರುಕುಗೊಳಿಸಿದೆ.
ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್, ಸಹಾಯಕ ಚುನಾವಣಾಧಿಕಾರಿ ಹಾಗೂ ತಹಸೀಲ್ದಾರ್ ಮತ್ತು ಮತ ಎಣಿಕಾ ಕಾರ್ಯದಲ್ಲಿ ತೊಡಗುವ ಇತರೆ ಅಧಿಕಾರಿಗಳ ಸಭೆ ನಡೆಸಿ ನಿರ್ದೇಶನ ನೀಡಿದರು.
ಮತ ಎಣಿಕೆ ವೇಳೆ ಯಾವುದೇ ರೀತಿಯ ಅಜಾಗರೂಕತೆ ಸಲ್ಲದು. ಅತ್ಯಂತ ಎಚ್ಚರಿಕೆಯಿಂದ ಎಲ್ಲವನ್ನೂ ನಿಭಾಯಿಸಬೇಕು. ಪ್ರತಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ ಪ್ರತ್ಯೇಕವಾಗಿ 14 ಟೇಬಲ್ಗಳಲ್ಲಿ ಆಯೋಜಿಸಲಾಗಿದೆ. ಎಲ್ಲಾ ಟೇಬಲ್ಗಳ ಎಣಿಕೆ ಏಜೆಂಟ್ಗಳು ಕಾಣಲು ಅನುಕೂಲ ಕಲ್ಪಿಸಿದೆ. ಒಂದಿಷ್ಟು ತೊಂದರೆಗಳಾಗದಂತೆ ಮತ ಎಣಿಕೆ ಕಾರ್ಯ ನಿರ್ವಹಿಸಿ ಎಂದು ಅವರು ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ಎಚ್.ಎನ್. ಗೋಪಾಲ ಕೃಷ್ಣ ಹಾಗೂ ಅಧಿಕಾರಿಗಳು ಹಾಜರಿದ್ದರು.