ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಅಂಬೇಡ್ಕರ್ ಭವನ ಉದ್ಘಾಟನೆ ಶೀಘ್ರ

Rashmi Kasaragodu
Updated On : 15 May 2014, 1:10 am

ಸಕಲೇಶಪುರ: ತಾಲೂಕಿನ ದಲಿತ ಸಮುದಾಯದ ಬಹುದಿನಗಳ ಕನಸಾದ ಅಂಬೇಡ್ಕರ್ ಭವನವು ಅತಿ ಶೀಘ್ರದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಪುರುಷೊತ್ತಮ್ ಹೇಳಿದ್ದಾರೆ.
ಮಂಗಳವಾರ ಪಟ್ಟಣಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಬೇ ಡ್ಕರ್ ಭವನದ ಕಾಮಗಾರಿಯನ್ನು ಪರಿಶೀಲನೆ ನಡೆಸಿ ಮಾತನಾಡಿ, ಕಳೆದ ಐದು ವರ್ಷಗಳಿಂದ ನಡೆಯುತ್ತಿದ್ದ ಕಾಮಗಾರಿಯು ಕೊನೆಯ ಹಂತ ತಲುಪಿದ್ದು, ವಿದ್ಯುತ್ ಸಂಪರ್ಕ ಪೂರ್ಣಗೊಂಡ ನಂತರ ಸಾರ್ವಜನಿಕರ ಉಪಯೋಗಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.
ಅಂಬೇಡ್ಕರ್ ಭವನದ ಉದ್ಘಾ ಟನೆ ಸಮಾರಂಭಕ್ಕೆ ಸಮಾಜ ಕಲ್ಯಾಣ ಇಲಾಖೆ ಸಚಿವರು, ಜಿಲ್ಲಾ ಮಂತ್ರಿ, ಲೋಕಸಭಾ ಸದಸ್ಯರು ಹಾಗೂ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರು ಪಾಲ್ಗೊಳ್ಳುತ್ತಾರೆಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement