ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

Rashmi Kasaragodu
Updated On : 15 May 2014, 1:08 am

ಅರಸೀಕೆರೆ: ತಾಲೂಕಿನ ಕೋಳಗುಂದ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಕಚೇರಿಗೆ ಸಕಾಲಕ್ಕೆ ಆಗಮಿಸುತ್ತಿಲ್ಲ. ಅನಗತ್ಯ ಗೈರಾಗುವ ಮೂಲಕ ಕರ್ತವ್ಯ ಲೋಪವೆಸಗುತ್ತಿದ್ದು ಕೂಡಲೇ ಇವರ ವಿರುದ್ಧ ಕ್ರಮ ಜರುಗಿಸಬೇಕೆಂದು ಸಂಕೀಹಳ್ಳಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕಳೆದ 2-3 ತಿಂಗಳಿಂದಲೂ ಸಂಕೀಹಳ್ಳಿ, ಸಂಕೀಹಳ್ಳಿ ಕಾಲೋನಿ ಗ್ರಾಮದ ಜನತೆ ಕುಡಿಯುವ ನೀರಿಗಾಗಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಪರಿಸ್ಥಿತಿ ಹೀಗಿದ್ದರೂ ಅಭಿವೃದ್ಧಿ ಅಧಿಕಾರಿ ಮಂಜುಳ ಕಚೇರಿಗೆ ಆಗಮಿಸಿ ಕುಂದು ಕೊರತೆಗಳನ್ನು ಆಲಿಸದೇ ತೀವ್ರ ಕರ್ತವ್ಯ ನಿರ್ಲಕ್ಷ್ಯ ತೋರುತ್ತಿದ್ದಾರೆ. ಕಚೇರಿಗೆ ಆಗಮಿಸಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುವ ಬದಲು ಸಮಸ್ಯೆ ಪರಿಹರಿಸುವಂತೆ ಪ್ರಶ್ನಿಸಿದರೆ ಉಡಾಫೆ ಉತ್ತರ ನೀಡುತ್ತಾರೆ.
ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಇತ್ತ ಗಮನ ಹರಿಸಿ ಗ್ರಾಮಕ್ಕೆ ನೀರು ಪೂರೈಕೆ ಮಾಡಬೇಕು. ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಗ್ರಾಮಸ್ಥರಾದ ಸದಾಶಿವ, ಬಸವರಾಜು ಇನ್ನಿತರರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement