ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ವಸತಿ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ

Rashmi Kasaragodu
Updated On : 15 May 2014, 1:13 am

ಹಾಸನ: ಸಮಾಜ ಕಲ್ಯಾಣ ಇಲಾಖೆಯ ಹಾಸನ ಟೌನ್, ಬಿ. ಕಾಟಿಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿಗೆ ಪ್ರಥಮ ಪಿಯುಸಿಗೆ 2014-15ನೇ ಸಾಲಿಗೆ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು, ಬಿ. ಕಾಟಿಹಳ್ಳಿ, ಎಲ್ಲಾ ಮೊರಾರ್ಜಿ ದೇಸಾಯಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗಳಲ್ಲಿ, ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿಗಳಲ್ಲಿ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿಗಳಲ್ಲಿ ಮತ್ತು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿ, ಹಾಸನ,. ಇಲ್ಲಿ ಮೇ 15ರಿಂದ ಪಡೆಯಬಹುದಾಗಿದೆ.
ವಸತಿ ಶಾಲೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಉಚಿತವಾಗಿ ಎಲ್ಲಾ ಸೌಲಭ್ಯ ನೀಡಲಾಗುವುದು. ಮೊರಾರ್ಜಿ ದೇಸಾಯಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಸರ್ಕಾರದ ಮೀಸಲಾತಿ ನಿಯಮಗಳನ್ವಯ ಹಾಗೂ ಹೈದ್ರಾಬಾದ್ ಕರ್ನಾಟಕದ ಮೀಸಲಾತಿ ನಿಯಮಾನುಸಾರ ವಿದ್ಯಾರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಯವರು ತಿಳಿಸಿದ್ದಾರೆ.
ಎಂ.ಎಲ್ಸಿ ಸ್ಥಾನ ನೀಡಿ
ಮೈಸೂರು: ಜಿಪಂ ಮಾಜಿ ಅಧ್ಯಕ್ಷ ಹಾಗೂ ನಾಯಕ ಜನಾಂಗದ ಮುಖಂಡ ಎಸ್.ಸಿ. ಬಸವರಾಜು ಅವರನ್ನು ವಿಧಾನಪರಿಷತ್ ಸದಸ್ಯರಾಗಿ ನೇಮಿಸುವಂತೆ ನಾಯಕ ಜನಾಂಗದ ಹಿತರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ದ್ಯಾವಪ್ಪನಾಯಕ ಆಗ್ರಹಿಸಿದರು. ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ಕೊಡಗು ಜಿಲ್ಲೆಗಳಲ್ಲಿ ನಾಯಕ ಜನಾಂಗವನ್ನು ಹೆಚ್ಚಾಗಿ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಸಾಮರ್ಥ್ಯವಿರುವ ಎಸ್.ಸಿ. ಬಸವರಾಜು ಅವರನ್ನು ವಿಧಾನಪರಿಷತ್ ಸದಸ್ಯರಾಗಿ ನೇಮಿಸಬೇಕು. ಈ ಮೂಲಕ ಕಾಂಗ್ರೆಸ್ ನಾಯಕರು ನಮ್ಮ ಸಮುದಾಯಕ್ಕೆ ಶಕ್ತಿ ತುಂಬಬೇಕು ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಕೋರಿದರು. ಮುಖಂಡರಾದ ಸಿದ್ದಪ್ಪ ಮರಸೆ, ರಘು ಯಡಕೊಳ, ದಿನೇಶ್, ಟಿ. ಮಂಜುನಾಥ್ ಇದ್ದರು.
ಟಿಇಟಿ ತರಬೇತಿ
ಮೈಸೂರು: ವಿದ್ಯಾಭವನ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವು ಒಂದು ತಿಂಗಳ ಟಿಇಟಿ ತರಬೇತಿ ಆಯೋಜಿಸಿದೆ. ತರಗತಿ ಆರಂಭವಾಗಿದ್ದು, ಆಸಕ್ತರು ಮೇ 16ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂ. 2481873 ಸಂಪರ್ಕಿಸಬಹುದು. ಬಿ.ಇಡಿ ವ್ಯಾಸಂಗ ಪೂರ್ಣಗೊಳಿಸಿದವರಿಗೆ ಟಿಇಟಿ ಪರೀಕ್ಷೆಗೆ 15 ದಿನಗಳ ತರಬೇತಿ ಆಯೋಜಿಸಿದೆ. ವಿಳಾಸ:  ಕೃಷಿ, ನಂ.195, 2ನೇ ಕ್ರಾಸ್, ಡಿ. ಸುಬ್ಬಯ್ಯ ರಸ್ತೆ, ರಾಮಸ್ವಾಮಿ ವೃತ್ತದ, ಲಕ್ಷ್ಮೀ ಹಯಗ್ರೀವ ಕಾಲೇಜು ಹತ್ತಿರ, ಚಾಮರಾಜ ಮೊಹಲ್ಲಾ, ಮೈಸೂರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement