ಸಾವಿನ ಬಾಯಿಂದ ಪ್ರಯಾಣಿಕರು ಪಾರು
ತಾಂಡವಪುರ: ನಂಜನಗೂಡು-ಮೈಸೂರು ಹೆದ್ದಾರಿಯಲ್ಲಿ ಕಾರು ಮತ್ತು ಲಾರಿಗೆ ಮುಖಾಮುಖಿ ಡಿಕ್ಕಿಯಾಗಿ ಕಾರಿನ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾದ ಘಟನೆ ಬುಧವಾರ ಮಧ್ಯಾಹ್ನ ತಾಂಡವಪುರ ಬಳಿ ಜರುಗಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರಿನ ನಂದಕುಮಾರ್ ಕಾರು ಚಾಲನೆ ಮಾಡುತ್ತಿದ್ದರು. ಕಾರಿನಲ್ಲಿದ್ದ ಬಿ.ಎಂ. ಮುತ್ತಮ್ಮ (45), ಮಿಥುನ್(15) ಹಾಗೂ ಶ್ರೇಣಿಕಾ (13) ಅವರಿಗೆ ಗಾಯಗಳಾಗಿದ್ದು, ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.