ವಸತಿ ಕಾಲೇಜಿಗೆ ಅರ್ಜಿ ಆಹ್ವಾನ
ಹಾಸನ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಹಾಸನ ನಗರದ ಬಿ.ಕಾಟಿಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿಗೆ ಪ್ರಥಮ ಪಿಯುಸಿಗೆ 2014-15ನೇ ಸಾಲಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು, ಬಿ. ಕಾಟಿಹಳ್ಳಿ, ಎಲ್ಲಾ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗಳಲ್ಲಿ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿಗಳಲ್ಲಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಗಳಲ್ಲಿ ಮತ್ತು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಕಚೇರಿ, ಹಾಸನ ಇಲ್ಲಿ ಮೇ 15ರಿಂದ ಪಡೆಯಬಹುದಾಗಿದೆ. ವಿದ್ಯಾರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ಹಾಸನ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಸಂಪರ್ಕಿಸಲು ಕೋರಿದೆ.
ವಸತಿ ಶಾಲೆಗಳಲ್ಲಿ ಶೇ.98 ಫಲಿತಾಂಶ
ಹಾಸನ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ 7 ಮೊರಾರ್ಜಿ ದೇಸಾಯಿ ಮತ್ತು 5 ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಸೇರಿದಂತೆ ಒಟ್ಟು 11 ಸಂಸ್ಥೆಗಳ 2014ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯ ಶೇ.98 ಫಲಿತಾಂಶ ಬಂದಿದ್ದು, 24 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ, 238 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 83 ವಿದ್ಯಾ ರ್ಥಿಗಳು ದ್ವಿತೀಯ ದರ್ಜೆ ಹಾಗೂ 43 ವಿದ್ಯಾರ್ಥಿಗಳು ಮೂರನೇ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.