ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಆಲೂರು ತಾಲೂಕು ಬಿಜೆಪಿ ಘಟಕ ವಿಜಯೋತ್ಸವ

Rashmi Kasaragodu
Updated On : 16 May 2014, 11:37 am

ಆಲೂರು: ರಾಜ್ಯ ಸೇರಿದಂತೆ ದೇಶದೆಲ್ಲೆಡೆ ನಿರೀಕ್ಷೆಗೂ ಮೀರಿ ಸ್ಥಾನಗಳನ್ನು ಪಡೆದ ಬಿಜೆಪಿ ರಾಷ್ಟ್ರದ ಚುಕ್ಕಾಣಿ ಹಿಡಿದಿರುವುದಕ್ಕೆ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.  ಕಳೆದ ಹತ್ತು ವರ್ಷಗಳ ಕಾಂಗ್ರೆಸ್ ದುರಾಡಳಿತದಿಂದ ಬೇಸತ್ತ ಜನತೆ, ಮೋದಿ ಅವರು ಗುಜರಾತಿನಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬದಲಾವಣೆ ಬಯಸಿ ಬಿಜೆಪಿಗೆ ಮತ ನೀಡಿದ್ದಾರೆ. ಇದರ ಪರಿಣಾಮವಾಗಿ ಬಿಜೆಪಿ ನಿರೀಕ್ಷೆ ಮೀರಿ ಸ್ಥಾನ ಗಳಿಸಿದೆ. ಮೋದಿ ಅವರ ಆಡಳಿತದಲ್ಲಿ ಬಿಜೆಪಿ ದೇಶದ ಸರ್ವತೋಮುಖ ಬೆಳವಣಿಗೆಗಾಗಿ ಶ್ರಮಿಸಲಿದೆ. ರಾಜ್ಯದಲ್ಲಿ ಕೂಡ ಜನತೆ ಆಡಳಿತ ಪಕ್ಷದ ವಿರುದ್ಧ ಮತ ಚಲಾಯಿಸಿದ್ದಾರೆ. ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು. ಕಾರ್ಯಕರ್ತರಾದ ಎ.ಎಚ್.ರಮೇಶ್, ಎ.ಎಚ್.ಲಕ್ಷ್ಮಣ್, ರವಿಪ್ರಕಾಶ್, ಚಂದ್ರಪ್ಪ, ಜಗದೀಶ, ಪುಷ್ಪ, ಕ್ಯಾಂಟೀನ್ ನಾಗರಾಜ, ಧರ್ಮಪ್ಪ, ಚಂದ್ರಶೇಖರ, ಕುಮಾರ್, ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement