ನಿಡಗೋಡು ಶಾಲೆಗೆ ಶೇ. ನೂರು ಫಲಿತಾಂಶ
ಬೇಲೂರು: ಪಟ್ಟಣದ ಮೂಡಿಗೆರೆ ರಸ್ತೆಯಲ್ಲಿರುವ ನಿಡಗೋಡು ಯುನೈಟೆಡ್ ಅಕಾಡೆಮಿ ಆಂಗ್ಲ ಮಾಧ್ಯಮ ಶಾಲೆಯು ಪ್ರತಿ ವರ್ಷದಂತೆ ಈ ಬಾರಿಯೂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದಿದೆ. ಶಾಲೆಯಲ್ಲಿ 27 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದು, ಈ 27 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.5 ವಿರ್ದ್ಯಾಗಳು ಅತ್ಯುನ್ನತ ಶ್ರೇಣಿಯಲ್ಲಿ, 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಯಲ್ಲಿ 3, ದ್ವಿತೀಯ ಶ್ರೇಣಿಯಲ್ಲಿ ತೇಗಎಡೆ ಹೊಂದಿದ್ದಾರೆ. ಗುರುಕುಲ ಟ್ರಸ್ಟ್ ಕಾರ್ಯದರ್ಶಿ ವಿ.ಎಸ್.ಭೋಜೇಗೌಡ ಮಾತನಾಡಿ, ನಮ್ಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾದ ಗಿನಿಂದ ಇದುವರೆಗೆ ಶೇ.100 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗುತ್ತಿ ದ್ದಾರೆ. ಇಬ್ಬರು ವಿದ್ಯಾರ್ಥಿಗಳಿಗೆ ಪ್ರತಿ ವರ್ಷದಂತೆ ಈ ವರ್ಷವು 10 ಮತ್ತು 5 ಸಾವಿರ ರೂ ಪ್ರೋತ್ಸಾಹ ದನ ನೀಡಿ ಗೌರ ವಿಸಲಾಗುವುದು ಎಂದು ತಿಳಿಸಿದ್ದಾರೆ.