ಬಿ.ಎಸ್. ಕಾವ್ಯ ಉತ್ತಮ ಅಂಕ
ಹಾಸನ: ನಗರದ ರಂಗೋಲಿಹಳ್ಳದ ವಿಜಯ ಚೇತನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಬಿ.ಎಸ್. ಕಾವ್ಯ ಇತ್ತೀಚೆಗೆ ನಡೆದ ದ್ವಿತೀಯ ಪಿಯು ಪರೀಕ್ಷೆಯಲ್ಲಿ 562 ಅಂಕ ಗಳಿಸುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ವಿಜ್ಞಾನ ವಿಭಾಗ ವಿದ್ಯಾರ್ಥಿನಿಯಾದ ಅವರು, ಭೌತಶಾಸ್ತ್ರದಲ್ಲಿ 98, ರಸಾಯನಶಾಸ್ತ್ರದಲ್ಲಿ 97, ಗಣಿತದಲ್ಲಿ 97 ಹಾಗೂ ಜೀವಶಾಸ್ತ್ರದಲ್ಲಿ 96 ಅಂಕಗಳನ್ನು ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಯಾವುದೇ ಮನೆ ಪಾಠಕ್ಕೆ ಹೋಗದೆ ಮನೆಯಲ್ಲೇ ಅಭ್ಯಾಸ ಮಾಡಿರುವ ಕಾವ್ಯ ಉತ್ತಮ ಸಾಧನೆ ಮಾಡಿದ್ದು, ಮುಂದೆ ಮೆಡಿಕಲ್ನಲ್ಲಿ ವಿದ್ಯಾರ್ಹತೆ ಮಾಡುವ ಹಂಬಲ ಹೊಂದಿದ್ದಾರೆ.