ಮೆಟ್ರಿಕ್ ಪೂರ್ವ ಹಾಸ್ಟೆಲ್ ಸೇರಲು ಅರ್ಜಿ ಆಹ್ವಾನ
ಅರಕಲಗೂಡು: ತಾಲೂಕಿನಲ್ಲಿ ನಿರ್ವಹಿಸಲ್ಪಡುತ್ತಿರುವ ಮೆಟ್ರಿಕ್‌ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 2014-15ನೇ ಸಾಲಿಗೆ ಹೊಸದಾಗಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ 5ನೇ ತರಗತಿಯಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ವರ್ಗಗಳ ವಿದ್ಯಾರ್ಥಿಗಳಿಂದ ಖಾಲಿ ಇರುವ ಸ್ಥಾನಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾಥಿಎರ್ ನಿಲಯಗಳಿಗೆ ಪ್ರವೇಶ ಬಯಸುವವರು ಸಂಬಂಧಪಟ್ಟ ವಿದ್ಯಾರ್ಥಿ ನಿಲಯಗಳಿಂದ ಅರ್ಜಿಗಳನ್ನು ಪಡೆದು ತಹಸೀಲ್ದಾರ್ ಅವರಿಂದ ಪಡೆದ ಜಾತಿ ಪ್ರಮಾಣ ಪತ್ರ,ಆದಾಯ ಪ್ರಮಾಣ ಪತ್ರ, ಕಳೆದ ಶೈಕ್ಷಣಿಕ ವರ್ಷದ ಪರೀಕ್ಷೆಯಲ್ಲಿ ಪಡೆದ ಅಂಕಪಟ್ಟಿ, ವಾಸದ ದೃಢೀಕರಣ ಪತ್ರದೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಜೂನ್ 10ರೊಳಗಾಗಿ ಸಂಬಂಧಪಟ್ಟ ವಿದ್ಯಾರ್ಥಿ ನಿಲಯಗಳಿಗೆ ಸಲ್ಲಿಸಲು ಕೋರಲಾಗಿದೆ.