ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ವಿನೂತನ ಪದವಿ ಕೋರ್ಸ್ ಆರಂಭ

Rashmi Kasaragodu
Updated On : 17 May 2014, 11:38 am

ಹೊಳೆನರಸೀಪುರ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪಟ್ಟಣದ ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುವ ಹಾಗೂ ಹೆಚ್ಚಿನ ಉದ್ಯೋಗಾವಕಾಶವನ್ನು ಹೊಂದಿರುವ ವಿನೂತನ ಕೋರ್ಸ್‌ಗಳನ್ನು ಪರಿಚಯಿಸುತ್ತಿದ್ದು, ವಿದ್ಯಾರ್ಥಿಗಳು ಇವುಗಳ ಸದುಪಯೋಗವನ್ನು ಪಡೆದುಕೊಳ್ಳುವಂತೆ ಇಲ್ಲಿನ ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಚನ್ನವೀರಪ್ಪ ತಿಳಿಸಿದ್ದಾರೆ. ಪಿಯುಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗಾಗಿ ಬಿಎಸ್‌ಸಿಯಲ್ಲಿ ರಸಾಯನಶಾಸ್ತ್ರ, ಪ್ರಾಣಿಶಾಸ್ತ್ರ, ಆಹಾರ ವಿಜ್ಞಾನ ಮತ್ತು ಪೋಷಣೆ ಕೋರ್ಸ್ ಆರಂಭಿಸಿದ್ದು, ಈ ಕೋರ್ಸ್ ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶ ತೆರೆದಿಡುವಲ್ಲಿ ಸಹಕಾರಿಯಾಗಿದ್ದು, ಹೆಚ್ಚಿನ ಬೇಡಿಕೆ ಇರುವ ಹೊಟೇಲ್ ಮ್ಯಾನೇಜ್‌ಮೆಂಟ್, ಡಯಟೀಷಿಯನ್, ಇಂಟೀರಿಯರ್ ಡೆಕೋರೇಷನ್, ಕೌನ್ಸೆಲಿಂಗ್ (ಆಪ್ತ ಸಲಹೆ) ಜೊತೆಗೆ ಸಾಂಪ್ರದಾಯಿಕವಾದ ಶಿಕ್ಷಕ, ಉಪನ್ಯಾಸಕ ವೃತ್ತಿಗೂ ಈ ಕೋರ್ಸ್‌ಗಳು ಅನುವು ಮಾಡಿಕೊಡುತ್ತವೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement