ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

13ನೇ ಹಣಕಾಸು ಯೋಜನೆ ಅನುದಾನದಲ್ಲಿ ಸ್ವಚ್ಛತೆಗೆ ಆದ್ಯತೆ

Srinivasa Murthy VN
Updated On : 19 May 2014, 11:52 am

ಚನ್ನರಾಯಪಟ್ಟಣ: ಪಟ್ಟಣದಲ್ಲಿನ ಚರಂಡಿಗಳನ್ನು ಅಭಿವೃದ್ಧಿಪಡಿಸಲು 13ನೇ ಹಣಕಾಸು ಯೋಜನೆಯಿಂದ ಬಿಡುಗಡೆಯಾಗಿರುವ ಅನುದಾನವನ್ನು ಬಳಕೆ ಮಾಡಿಕೊಂಡು ಪಟ್ಟಣದ ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು ಎಂದು ಶಾಸಕ ಸಿ.ಎನ್ ಬಾಲಕೃಷ್ಣ ತಿಳಿಸಿದರು.
ಪಟ್ಟಣದ ಮೈಸೂರು ರಸ್ತೆಯಲ್ಲಿ 13ನೇ ಹಣಕಾಸು ಯೋಜನೆಯಿಂದ ರು. 53 ಲಕ್ಷ ಗಳಲ್ಲಿ ಬಾಕ್ಸ್ ಚರಂಡಿ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಮೈಸೂರು ರಸ್ತೆ ಹಾಗೂ ಆಸ್ಪತ್ರೆ ರಸ್ತೆಗಳಲ್ಲಿ ಬಾಕ್ಸ್ ಚರಂಡಿ ನಿರ್ಮಾಣ ಕಾರ್ಯಕ್ಕೆ ಟೆಂಡರ್ ಕರೆಯಲಾಗಿದೆ ಎಂದು ತಿಳಿಸಿದರು.  ಆಸ್ಪತ್ರೆ ಮುಂಭಾಗದಿಂದ ಹೊಳೆನರಸೀಪುರ ರಸ್ತೆ ಕ್ರಾಸ್‌ವರಗೆ ದ್ವಿಪಥ ರಸ್ತೆ ನಿರ್ಮಾಣದ ಉದ್ದೇಶ ಹೊಂದಿದ್ದು, ಈ ನಿಟ್ಟಿನಲ್ಲಿ ರು. 2.3ಕೋಟಿ ವೆಚ್ಚದಲ್ಲಿ ಯೋಜನೆ ತಯಾರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಚನ್ನರಾಯಪಟ್ಟಣ ನುಗ್ಗೇಹಳ್ಳಿ ರಸ್ತೆ ಡಾಂಬರೀಕರಣಕ್ಕೆ ರು. 2.5ಕೋಟಿ ವೆಚ್ಚದಲ್ಲಿ ರಸ್ತೆ ಆಧುನೀಕರಣಕ್ಕೆ ಟೆಂಡರ್ ಕರೆಯಲಾಗಿದ್ದು, ಚನ್ನರಾಯಪಟ್ಟಣ ಬಾಗೂರು ರಸ್ತೆಯಲ್ಲಿ ಬೆಲಸಿಂದ ಬಳಿಯಿಂದ ಕುರುವಂಕದವರಗೆ ದ್ವಿಪಥ ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು. ನಂತರದಲ್ಲಿ ಕೆಂಬಾಳುವರಗೆ ರಸ್ತೆ ಆಧುನೀಕರಣ ಮಾಡಲಾಗುವುದು ಎಂದರು. ಪಟ್ಟಣದ ನವೋದಯ ಕಾಲೇಜು ಹಾಗೂ ಸವಿತಾ ಶಿವನಂಜೇಗೌಡ ಕಲ್ಯಾಣ ಮಂಟಪದ ಬಳಿಯಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಿಂದ ಬಸ್ ಶೆಲ್ಟರ್ ನಿರ್ಮಿಸಲಾಗುವುದು ಎಂದು ತಿಳಿಸಿದರು. ಪುರಸಭೆ ಅಧ್ಯಕ್ಷ ಮಂಜಣ್ಣ, ಜಿಲ್ಲಾ ಪಂಚಾಯಿತಿ ಸದಸ್ಯ ಶಿವಶಂಕರ್ ಕುಂಠೆ, ತಾಲೂಕು ಪಂಚಾಯಿತಿ ಸದಸ್ಯ ಬಸವರಾಜು ಇದ್ದರು.

ಮೈಸೂರು ರಸ್ತೆ ಹಾಗೂ ಆಸ್ಪತ್ರೆ ರಸ್ತೆಗಳಲ್ಲಿ ಬಾಕ್ಸ್ ಚರಂಡಿ ನಿರ್ಮಾಣ ಕಾರ್ಯಕ್ಕೆ ಟೆಂಡರ್ ಕರೆಯಲಾಗಿದೆ
-ಶಾಸಕ ಸಿ.ಎನ್ ಬಾಲಕೃಷ್ಣ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement