ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ಆಡಂಬರದ ಜೀವನಕ್ಕಾಗಿ ಅಡ್ಡದಾರಿ'

Srinivasa Murthy VN
Updated On : 19 May 2014, 11:51 am

ಹಳೇಬೀಡು: ಇತ್ತೀಚಿನ ದಿನಗಳಲ್ಲಿ ಆಡಂಬರದ ಜೀವನ ನಡೆಸುವುದಕ್ಕೋಸ್ಕರ ಕೆಲವರು ಅಡ್ಡದಾರಿಹಿಡಿದು ಎಚ್‌ಐವಿ  ಸೋಂಕನ್ನು ಬಳುವಳಿಯಾಗಿ ಪಡೆಯುತ್ತಿದ್ದಾರೆ ಎಂದು  ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಜಿಲ್ಲಾ ಮೇಲ್ವಿಚಾರಕ ಹಾಗೂ ರೆಡ್‌ಕ್ರಾಸ್ ಸದಸ್ಯ  ರವಿ ಕುಮಾರ್ ತಿಳಿಸಿದರು.
ಹಳೆಬೀಡು ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ರೆಡ್‌ಕ್ರಾಸ್ ಘಟಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆದ ಯುವ ರೆಡ್‌ಕ್ರಾಸ್ ಘಟಕ ಮತ್ತು ರಕ್ತದಾನದ ಮಹತ್ವ ಹಾಗೂ ಹೆಚ್.ಐ.ವಿ ಏಡ್ಸ್ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಎಚ್‌ಐವಿ ಸೋಂಕಿನ ಬಗ್ಗೆ ತಿಳಿದುಕೊಂಡು ಜಾಗೃತರಾಗಬೇಕಾದ ಅವಶ್ಯಕತೆ ಇದೆ ಹಾಗೂ ಇದರ ಜೊತೆಯಲ್ಲೆ ರಕ್ತದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ವಿದ್ಯಾರ್ಥಿಗಳು ಮಾಡಬೇಕು. ಆರೋಗ್ಯವಂತ ಯುವಜನತೆ ದೇಶದ ಸಂಪತ್ತು ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಚನ್ನರಾಯಪಟ್ಟಣ, ಹಾಸನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಏಡ್ಸ್ ರೋಗಿಗಳಿದ್ದಾರೆ. ನಂತರದಲ್ಲಿ ಸಕಲೇಶಪುರ ಮತ್ತು ಬೇಲೂರು ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಏಡ್ಸ್ ರೋಗಿಗಳು ಹೆಚ್ಚುತ್ತಿದ್ದು ಇದನ್ನು ತಾಲೂಕಿನಿಂದಲೇ  ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಮೀಪದ ಆಪ್ತ ಸಮಾಲೋಚನಾ ಕೇಂದ್ರಕ್ಕೆ ತೆರೆಳಿ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬಹುದು ಮತ್ತು ಪ್ರತಿಯೊಬ್ಬರು ಐಸಿಟಿಸಿ ಕೇಂದ್ರಕ್ಕೆ ತೆರಳಿ ಏಡ್ಸ್ ಬಗ್ಗೆ ಪರೀಕ್ಷೆ ಮಾಡಿಸಿಕೊಳ್ಳಬಹುದು ಎಂದು ತಿಳಿಸಿದರು.
ಹೆಚ್ಚಿನ ಜನರಿಗೆ ರಕ್ತದಾನದ ಬಗ್ಗೆ ಮಾಹಿತಿ ನೀಡಿ ಹೆಚ್ಚಿನ ಜನರು ರಕ್ತ ದಾನದಂಥ ಶಿಬಿರಗಳಲ್ಲಿ ಭಾಗವಹಿಸುವಂತೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಹುಲಿಕೆರೆ ರಾಜು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದಹಳೆಬೀಡು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನಾರಾಯಣ್ ಮಾತನಾಡಿ,  ವಿದ್ಯಾರ್ಥಿಗಳು ಮಾನಸಿಕವಾಗಿ ಸದೃಢ ರಾಗಿರಬೇಕು, ಯಾವುದೇ ರೀತಿಯ ಕೆಟ್ಟ ಆಕರ್ಷಣೆಗಳಿಗೆ ಒಳಗಾಗಬಾರದು ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಎನ್‌ಣ.ಎಸ್‌ಣ.ಎಸ್‌ಣ. ಅಧಿಕಾರಿ ಡಾ ರಮೇಶ್‌ಣ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement