ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನ

Srinivasa Murthy VN
Updated On : 21 May 2014, 12:05 pm

ಅರಕಲಗೂಡು: ತಾಲೂಕಿನ  ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಈ ಕೆಳಕಂಡ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ನಿಲಯಗಳಿಗೆ ಖಾಲಿ ಇರುವ ವರ್ಗವಾರು ಸ್ಥಾನಗಳಿಗೆ 2014-15ನೇ ಸಾಲಿಗೆ ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು ಉಚಿತವಾಗಿ ಸಂಬಂಧಿಸಿದ ವಿದ್ಯಾರ್ಥಿ ನಿಲಯಗಳಲ್ಲಿ ಮತ್ತು ತಾಲೂಕು ಪಂಚಾಯಿತಿ ಕಚೇರಿಯ ಬಿಸಿಎಂ ಶಾಖೆಯಲ್ಲಿ ಪಡೆಯಬಹುದಾಗಿದೆ.
ವಿದ್ಯಾರ್ಥಿನಿಲಯಗಳ ಹೆಸರು ಮತ್ತು ಸ್ಥಳ: ಮೆಟ್ರಿಕ್‌ಪೂರ್ವ ಬಾಲಕಿಯರ  ವಿದ್ಯಾರ್ಥಿ ನಿಲಯ, ಅರಕಲಗೂಡು, ಮೆಟ್ರಿಕ್‌ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಅರಕಲಗೂಡು  ಮೆಟ್ರಿಕ್‌ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಬೈಚನಹಳ್ಳಿ ಮೆಟ್ರಿಕ್‌ಪೂರ್ವಬಾಲಕರ ವಿದ್ಯಾರ್ಥಿ ನಿಲಯ, ದೊಡ್ಡಮಗ್ಗೆ,  ಮೆಟ್ರಿಕ್‌ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಕೊಣನೂರು. ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಕೊಣನೂರು ಮೆಟ್ರಿಕ್‌ಪೂರ್ವಬಾಲಕರ ವಿದ್ಯಾರ್ಥಿ ನಿಲಯ, ಬಸವಾಪಟ್ಟಣ, ಮೆಟ್ರಿಕ್‌ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಗಂಗೂರು, ಮೆಟ್ರಿಕ್‌ಪೂರ್ವಬಾಲಕರ ವಿದ್ಯಾರ್ಥಿ ನಿಲಯ, ರುದ್ರಪಟ್ಟಣ
ನಿಯಮಗಳು: 5ನೇ ತರಗತಿಯಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
    ಹಿಂದಿನ  ಸಾಲಿನಲ್ಲಿ (2013-14) ಉತ್ತೀರ್ಣರಾದ ವಿದ್ಯಾರ್ಥಿಗಳೂ ಅರ್ಹರಾಗಿರುತ್ತಾರೆ. ಅರ್ಜಿಯೊಂದಿಗೆ ಜಾತಿ ಆದಾಯ ಪತ್ರ, ವಾಸಸ್ಥಳ ದೃಢೀಕರಣ, ಹಿಂದಿನ ಸಾಲಿನಲ್ಲಿ ಉತ್ತೀರ್ಣರಾಗಿರುವ ಅಂಕ ಪಟ್ಟಿ ಲಗತ್ತಿಸಬೇಕು. ಪ್ರವರ್ಗ-1 ಮತ್ತು ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ ಆದಾಯದ ಮಿತಿ 2,00000.00 ಪ್ರವರ್ಗ2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ವಾರ್ಷಿಕ ಆದಾಯ 44,500 ರು.ಗೆ   ಮೀರಿರಬಾರದು.  ವಿದ್ಯಾರ್ಥಿ ನಿಲಯಕ್ಕೂ ಅಭ್ಯರ್ಥಿಯ ಸ್ವಂತ ವಾಸಸ್ಥಳಕ್ಕೂ ಇರುವ ದೂರದ (ಕಿ.ಮೀ.ಗಳಲ್ಲಿ) ದೃಢೀಕರಣ ಪತ್ರವನ್ನು ಗ್ರಾಮ ಪಂಚಾಯತಿ ಕಾರ್ಯದರ್ಶಿಗಳಿಂದ ಪಡೆದು ಅರ್ಜಿಯೊಂದಿಗೆ ಲಗತ್ತಿಸಬೇಕು.
  ಸೇರಬಯಸುವ ವಿದ್ಯಾರ್ಥಿಗಳು  ಜೂನ್ 10 ರೊಳಗೆ  ಸಂಬಂಧಿಸಿದ ವಿದ್ಯಾರ್ಥಿ ನಿಲಯಗಳಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
  ನವೀಕರಣ ಅರ್ಜಿಗಳನ್ನು ಆಯಾ ವಿದ್ಯಾರ್ಥಿ ನಿಲಯಗಳಲ್ಲಿ ಪಡೆದು ಅರ್ಜಿಯೊಂದಿಗೆ ಹಿಂದಿನ ವರ್ಷದಲ್ಲಿ ಉತ್ತೀರ್ಣರಾದ ಅಂಕಪಟ್ಟಿ ಲಗತ್ತಿಸಿ ಸಂಬಂಧಿಸಿದ ಮುಖ್ಯೋಪಾಧ್ಯಾಯರಿಂದ ದೃಢೀಕರಿಸಿ ಸಲ್ಲಿಸತಕ್ಕದ್ದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement