ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಕಲೆ ವಿದ್ಯಾರ್ಥಿಗಳಿಗೂ ವಾಣಿಜ್ಯ ಪ್ರವೇಶ

Mainashree
Updated On : 21 May 2014, 9:08 am

ಹಾಸನ: ತಾಲೂಕಿನ ಮೊಸಳೆ ಹೊಸಹಳ್ಳಿಯಲ್ಲಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ 2014-15ನೇ ಸಾಲಿಗೆ ಬಿ.ಎ., ಬಿ.ಕಾಂ. ಮತ್ತು ಬಿ.ಬಿ.ಎಂ. ಪದವಿ ಕೋರ್ಸುಗಳಿಗೆ ಪ್ರವೇಶ ಪ್ರಾರಂಭವಾಗಿದೆ.
ಇತಿಹಾಸ, ಅರ್ಥಶಾಸ್ತ್ರ, ಸಮಾಜ ಶಾಸ್ತ್ರ, ರಾಜ್ಯಶಾಸ್ತ್ರ ಮತ್ತು ಐಚ್ಛಿಕ ಕನ್ನಡ ವಿಷಯಗಳನ್ನೊಳಗೊಂಡ ಸಂಯೋಜನೆಗಳು ಬಿ.ಎ. ವಿಭಾಗದಲ್ಲಿ ಅಧ್ಯಯನಕ್ಕೆ ಲಭ್ಯ ವಿರುತ್ತವೆ. ವಾಣಿಜ್ಯ ಪದವಿಗೆ ಇರುವ ಬೇಡಿಕೆಯ ದೃಷ್ಟಿಯಿಂದ ಆರ್ಟ್ಸ್ ಓದಿರುವ ವಿದ್ಯಾರ್ಥಿಗಳಿಗೂ  ಬಿ.ಕಾಂ. ಮತ್ತು ಬಿ.ಬಿ.ಎಂ.ಗೆ ಪ್ರವೇಶಕ್ಕೆ ವಿಶೇಷ ಅವಕಾಶ ಕಲ್ಪಿಸಲಾಗಿದೆ.
ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳನ್ನು ಉದ್ಯೋಗ ಕ್ಷೇತ್ರಕ್ಕೆ ತರಬೇತುಗೊಳಿಸುವ ಉದ್ದೇಶದಿಂದ ಕಂಪ್ಯೂಟರ್ ಮತ್ತು ಅಂತರ್ಜಾಲ, ಇಂಗ್ಲಿಷ್ ಭಾಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ಉಚಿತ ತರಬೇತಿ ಒದಗಿಸಲಾಗುವುದು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ನಾನಾ ಯೋಜನೆಗಳ ಅಡಿಯಲ್ಲಿ ನಗರದ ಯಾವುದೇ ಕಾಲೇಜಿನಲ್ಲಿ  ದೊರೆಯಬಹುದಾದ ಉತ್ತಮ ಮೂಲ ಸೌಲಭ್ಯ ಹೊಂದಿರುವ ಈ ಸರ್ಕಾರಿ ಕಾಲೇಜಿನಲ್ಲಿ ಪ್ರವೇಶ ಪಡೆದು ಸರ್ಕಾರ ನೀಡಿರುವ ಸವಲತ್ತುಗಳ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement