ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಸಿಡಿಲು ಬಡಿದು ಇಬ್ಬರು ಸಾವು

Mainashree
Updated On : 21 May 2014, 9:08 am

ಹಾಸನ: ಜಿಲ್ಲಾದ್ಯಂತ ಬುಧವಾರ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಕೆಲವೆಡೆ ರಸ್ತೆ ಬದಿ ಮರಗಳು ಉರುಳಿದ್ದರಿಂದ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದವು. ಇದರಿಂದ ಸಂಜೆ 7 ರವರೆಗೆ ವಿದ್ಯುತ್ ಕಡಿತಗೊಂಡಿತ್ತು. ಹಾಸನ ಮತ್ತು ಅರಸೀಕೆರೆಯಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ.
ಹಾಸನ ತಾಲೂಕು ಶಾಂತಿಗ್ರಾಮ ಹೋಬಳಿ ಜುಂಜನಹಳ್ಳಿಯಲ್ಲಿ ಬೇಲೂರಯ್ಯ ಎಂಬುವರ ಪುತ್ರ ಮಧು(20) ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಮಳೆ ಬಂದ ಕಾರಣ ಬೈಕ್‌ನಿಲ್ಲಿಸಿ ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಶಾಂತಿಗ್ರಾಮ ಠಾಣೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.
ಅರಸೀಕೆರೆ ವರದಿ: ದನ ಕಾಯುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸ್ಥಳದಲ್ಲಿಯೇ ಮರಣ ಹೊಂದಿರುವ ಘಟನೆ ತಾಲೂಕಿನ ಅಗ್ಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಮ್ಮೇನಹಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ 5ಗಂಟೆ ಸಮಯದಲ್ಲಿ  ನಡೆದಿದೆ. ಗ್ರಾಮದ ತಿಮ್ಮಯ್ಯ ಎಂಬುವರ ಪತ್ನಿ ಸಿದ್ದಮ್ಮ(55) ಸಿಡಿಲಿಗೆ ಸಿಕ್ಕಿ ಮೃತಪಟ್ಟಿರುವ ದುರ್ದೈವಿಯಾಗಿದ್ದು, ಗ್ರಾಮದ ಹೊರಭಾಗದಲ್ಲಿ ದನಗಳು ಮೇಯಿಸುತ್ತಿದ್ದ ವೇಳೆ ಗುಡುಗು ಸಹಿತ ಮಳೆಆಗಿದ್ದರಿಂದ ಆಶ್ರಯ ಪಡೆಯಲು ದಾರಿ ಬದಿಯಲ್ಲಿನ ಆಲದಮರದಡಿ ಬಂದು ನಿಂತಿದ್ದರು. ಈ ಸಂದರ್ಭದಲ್ಲಿ ಸಿಡಿಲಿನ ರಭಸಕ್ಕೆ ಸಿಕ್ಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement