ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಅರಕಲಗೂಡು: ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ನಿಲಯಗಳಿಗೆ ಖಾಲಿ ಇರುವ ವರ್ಗವಾರು ಸ್ಥಾನಗಳಿಗೆ ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಗಳನ್ನು ಉಚಿತವಾಗಿ ಸಂಬಂಧಿಸಿದ ವಿದ್ಯಾರ್ಥಿ ನಿಲಯಗಳಲ್ಲಿ ಮತ್ತು ತಾಲೂಕು ಪಂಚಾಯಿತಿ ಕಚೇರಿಯ ಬಿಸಿಎಂ ಶಾಖೆಯಲ್ಲಿ ಪಡೆಯಬಹುದಾಗಿದೆ ಅರಕಲಗೂಡು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ತಿಳಿಸಿದ್ದಾರೆ.
ವಿದ್ಯಾರ್ಥಿನಿಲಯಗಳ ವಿವರ: ಮೆಟ್ರಿಕ್ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ, ಅರಕಲಗೂಡು, ಬಾಲಕರ ವಿದ್ಯಾರ್ಥಿ ನಿಲಯ, ಬೈಚನಹಳ್ಳಿ, ದೊಡ್ಡಮಗ್ಗೆ, ಕೊಣನೂರು, ಅಲ್ಪಸಂಖ್ಯಾತರ ಬಾಲಕರ ವಿದ್ಯಾರ್ಥಿ ನಿಲಯ, ಕೊಣನೂರು, ಬಸವಾಪಟ್ಟಣ, ಗಂಗೂರು, ರುದ್ರಪಟ್ಟಣ.
ನಿಯಮಗಳು: 5ನೇ ತರಗತಿಯಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಹಿಂದಿನ ಸಾಲಿನಲ್ಲಿ (2013-14) ಉತ್ತೀರ್ಣರಾದ ವಿದ್ಯಾರ್ಥಿಗಳೂ ಅರ್ಹರಾಗಿದ್ದಾರೆ.
ವಿದ್ಯಾರ್ಥಿ ನಿಲಯಕ್ಕೂ ಅಭ್ಯರ್ಥಿಯ ಸ್ವಂತ ವಾಸ ಸ್ಥಳಕ್ಕೂ ಇರುವ ದೂರದ(ಕಿ.ಮೀ.ಗಳಲ್ಲಿ) ದೃಢೀಕರಣ ಪತ್ರವನ್ನು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಿಂದ ಪಡೆದು ಜೂನ್10ರೊಳಗೆ ಅರ್ಜಿ ಸಲ್ಲಿಸಬೇಕು.