ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ವೀರಭದ್ರಸ್ವಾಮಿಗೆ ವಿಶೇಷ ಪೂಜೆ

Mainashree
Updated On : 27 May 2014, 9:43 am

ಅರಸೀಕೆರೆ: ಪಟ್ಟಣದ ರುದ್ರಗುಡಿ ಬೀದಿಯಲ್ಲಿರುವ ವೀರಭದ್ರೇಶ್ವರಸ್ವಾಮಿ  ದೇವಾಲಯದಲ್ಲಿ ರುದ್ರಾಭಿಷೇಕ ಮತ್ತು ರುದ್ರ ಹೋಮ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ನೂರಾರು ಭಕ್ತರು ಸೇರಿ ನೆರವೇರಿಸಿದರು.
ಪಟ್ಟಣದ ಮಧ್ಯಭಾಗದಲ್ಲಿರುವ ಪುರಾತನ ಕಾಲದ ರುದ್ರಗುಡಿಯಲ್ಲಿ ಪೂಜಿಸಲ್ಪಡುತ್ತಿರುವ ವೀರಭದ್ರೇಶ್ವರಸ್ವಾಮಿಗೆ ಸೋಮವಾರ ಬೆಳಗಿನ ಜಾವ 5.30 ಗಂಟೆಗೆ ಪಂಚಾಮೃತ ಅಭಿಷೇಕ, ಮಹಾ ರುದ್ರಾಭಿಷೇಕ. ಗಣಹೋಮ, ನವಗ್ರಹ ಹೋಮ, ವಾಸ್ತು ಹೋಮ ಸೇರಿದಂತೆ ಅನೇಕ ಪೂಜಾ ಕೈಕಂರ್ಯಗಳನ್ನು ಭಕ್ತಾಧಿಗಳು ನೆರವೇರಿಸಿದರು.
ಬೆಳಗ್ಗೆ 8ರ ನಂತರ ಮಹಾ ರುದ್ರಹೋಮ, ಪೂರ್ಣಾಹುತಿ ಹಾಗೂ ಮಹಾಮಂಗಳಾರತಿ ಕಾರ್ಯಕ್ರಮಗಳನ್ನು ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ನಾನಾ ಭಾಗಗಳಿಂದ ಆಗಮಿಸಿದ್ದ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ದೇವಾಲಯ ವ್ಯವಸ್ಥಾಪನ ಸಮಿತಿ ಸದಸ್ಯ ಹಾಗೂ ಕಾರ್ಯಕ್ರಮ ಸಂಯೋಜಕ  ಬಿ.ವಿ. ವೀರಭದ್ರಪ್ಪ ಮತ್ತು ಜಯಣ್ಣ, ಬಸವರಾಜು ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement