ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ಬಾಲಕಾರ್ಮಿಕರ ಬಗ್ಗೆ ಗಮನಹರಿಸಿ'

Srinivasa Murthy VN
Updated On : 30 May 2014, 10:41 am

ಹಾಸನ: ಜಿಲ್ಲೆಯಲ್ಲಿ ಗುರುತಿಸಿರುವ ಬಾಲಕಾರ್ಮಿಕರನ್ನು ಶಾಲೆಗೆ ಸೇರಿಸಿ ವ್ಯವಸ್ಥೆ ಕಲ್ಪಿಸಿ, ಜತೆಗೆ ಅವರು ಶಾಲೆಗೆ ಹೋಗುತ್ತಿದ್ದಾರೆಯೇ ಇಲ್ಲವೇ ಎಂಬ ಕುರಿತು ಆಗಾಗ ಗಮನಹರಿಸಿ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ. ಹೆಚ್.ಎನ್.ಗೋಪಾಲಕೃಷ್ಣ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸುವ ಕುರಿತು ಗುರುವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚಿಕ್ಕ ವಯಸ್ಸಿನಲ್ಲಿ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾದ ಎಂಬುದನ್ನು ತಾಯಿ-ತಂದೆಯರಿಗೆ ಮನವರಿಕೆ ಮಾಡಿಕೊಡಬೇಕು ಎಂದರಲ್ಲದೆ, ಸರ್ಕಾರದಿಂದ ದೊರಕುವ ಶಿಕ್ಷಣ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಬೇಕು. ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.
ಜೂ. 12 ರಂದು ಅರ್ಥಪೂರ್ಣವಾಗಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸಲು ನಗರದ ಆಯ್ದ ಪ್ರದೇಶಗಳಲ್ಲಿ ಜನರಿಗೆ ಬಾಲ ಕಾರ್ಮಿಕ ಪದ್ಧತಿ ಕುರಿತು ಅರಿವು ಮೂಡಿಸಲು ಜಾಗೃತಿ ಜಾಥಾ ಏರ್ಪಡಿಸುವಂತೆ ಮತ್ತು ಕರಪತ್ರ ವಿತರಿಸಿ, ಬೀದಿ ನಾಟಕ ಪ್ರದರ್ಶನ ಏರ್ಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಜಾಥಾದಲ್ಲಿ ಸ್ತ್ರೀ ಶಕ್ತಿ ಸಂಘದ ಸದಸ್ಯರು, ನರ್ಸಿಂಗ್ ವಿದ್ಯಾರ್ಥಿಗಳು, ಸ್ವಯಂ ಸೇವಾ ಸಂಸ್ಥೆಗಳು ಭಾಗವಹಿಸಲಿವೆ. ನಗರದ ಹಾಸನಾಂಬಾ ಕಲಾಕ್ಷೇತ್ರದಲ್ಲಿ ಸಭಾ ಕಾರ್ಯಕ್ರಮ ಜರುಗಲಿದೆ ಎಂದರು.
ಉಪಕಾರ್ಮಿಕ ಆಯುಕ್ತ ಬಾಲಕೃಷ್ಣ, ಜಂಟಿ ಕೃಷಿ ನಿರ್ದೇಶಕ ಬಿ.ಶಿವರಾಜು, ನಗರ ಸಭೆಯ ಆಯುಕ್ತ  ಕೃಷ್ಣಮೂರ್ತಿ, ಎಚ್. ಸಿ. ಚಿದಾನಂದ್, ಜಿ.ಆರ್.ಬಸವರಾಜು,  ವಿ. ಗೀತಾ ಹಾಗೂ ಇತರ ಅಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement