ಅಕ್ರಮ ಸಾರಾಯಿ ವಶ
ನರಗುಂದ: ತಾಲೂಕಿನ ಚಿಕ್ಕನರಗುಂದ ಗ್ರಾಮದ ಕೆರೆಯ ದಂಡೆ ಮೇಲೆ ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಅನಿಲ್ ಮುನವಳ್ಳಿ ಮಾರಾಟ ಮಾಡಲು ತಂದ 111 ಬಾಟಲ್ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.