ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಕಡ್ಡಾಯವಾಗಿ ಮತ ಚಲಾಯಿಸಿ: ತುಷಾರ

Vishwanath S
Updated On : 2 Apr 2013, 10:34 am

ಕನ್ನಡಪ್ರಭ ವಾರ್ತೆ, ಹಾವೇರಿ, ಏ. 1
ಹದಿನೆಂಟು ಹಾಗೂ ಅದಕ್ಕೂ ಮೇಲ್ಪಟ್ಟ ವಯಸ್ಸಿನವರು ತಮ್ಮ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಬೇಕು. ಈಗಾಗಲೇ ಹೆಸರಿದ್ದವರು ಪಟ್ಟಿಯಲ್ಲಿ ಹೆಸರು ಇರುವುದನ್ನು ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳಬೇಕು ಮತ್ತು ಮತಪಟ್ಟಿಯಲ್ಲಿ ಹೆಸರಿರುವರು ತಮ್ಮ ಮತದಾನದ ಅಧಿಕಾರವನ್ನು ತಪ್ಪದೇ ಚಲಾಯಿಸಬೇಕೆಂದು ಹಿರೇಕೆರೂರು ತಹಸೀಲ್ದಾರ್ ತುಷಾರ ಹೊಸೂರ ನುಡಿದರು.
ಸೋಮವಾರ ಹಿರೇಕೆರೂರು ತಾಲೂಕಿನ ಹಂಸಭಾವಿಯಲ್ಲಿ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಾರ್ವಜನಿಕ ಶಿಕ್ಷಣ ಇಲಾಖೆ, ವಾರ್ತಾ ಇಲಾಖೆ ಹಾಗೂ ಮಹಾಂತ ಸ್ವಾಮಿ ಮಹಾವಿದ್ಯಾಲಯ ಆಶ್ರಯದಲ್ಲಿ ಆಯೋಜಿಸಿದ್ದ ಮತದಾರರ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಸೂಕ್ತ ಮಾಹಿತಿ ಒದಗಿಸಿ: ಜನ್ಮ ಹಾಗೂ ವಿಳಾಸ ದಾಖಲೆ ಜೊತೆಗೆ 2 ಫೋಟೋ ಲಗತ್ತಿಸಿ ಅರ್ಜಿದಾರರು ಅರ್ಜಿ ಸಲ್ಲಿಸಬೇಕು. ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತೆಗೆದು ಹಾಕಲು, ಲೋಪದೋಷ ತಿದ್ದುಪಡಿಗೆ ಬಳಸಬೇಕಾದ ನಮೂನೆಗಳ ಕುರಿತು ಮಾಹಿತಿ ನೀಡಿದರು.
ಹಂಸಭಾವಿ ಮಹಾಂತ ಸ್ವಾಮಿ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ ಪಿ.ಜಿ. ಪತ್ರೆ ಮಾತನಾಡಿ, ಮತದಾರರ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಜಿಲ್ಲೆಯ ಮತದಾನ ಪ್ರಮಾಣವನ್ನು 80ಕ್ಕೆ ಹೆಚ್ಚಿಸಬೇಕೆಂದು ಚುನಾವಣಾ ಆಯೋಗ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಮುಂದಿನ ಒಂದು ತಿಂಗಳಾವಧಿ ಪೂರ್ತಿ ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲಾಡಳಿತ ಆಯೋಜಿಸಿದೆ ಎಂದು ಹೇಳಿದರು.
ಇದರಲ್ಲಿ ನೋಂದಣಿಯಾಗದೇ ಉಳಿದಿರುವವರ ನೋಂದಣಿಗೆ ಅದರಲ್ಲೂ ಮುಖ್ಯವಾಗಿ ಮಹಿಳಾ ಮತದಾರರ ನೋಂದಣಿ ಕಾರ್ಯಕ್ಕೆ ಒತ್ತು ನೀಡುವ ಉದ್ದೇಶ ಪ್ರಮುಖವಾಗಿದೆ ಎಂದರು.
ಮಹಾವಿದ್ಯಾಲಯದ ಸಾಂಸ್ಕೃತಿಕ ಸಂಘದ ಸಂಚಾಲಕ ಹಾಗೂ ಪ್ರಾಧ್ಯಾಪಕ ಪ್ರೊ. ಡಿ.ವಿ. ಹಿರೇಮಠ, ವಾರ್ತಾ ಸಹಾಯಕ ವಸಂತ ಮಡ್ಲೂರ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಟ  ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
ಮತದಾರರ ಜಾಗೃತಿ ಜಾಥಾ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಮತದಾರರಿಗೆ ಜಾಗೃತಿ ಮೂಡಿಸಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement