ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಇಂದು ರೈತರಿಂದ ರಸ್ತೆ ತಡೆ, ಮುತ್ತಿಗೆ

Vishwanath S
Updated On : 3 Apr 2013, 10:46 am

ಬ್ಯಾಡಗಿ: ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕು ಘಟಕ ರೈತರಿಗೆ ಬೆಳೆವಿಮೆ ಪರಿಹಾರ ನೀಡುವಂತೆ ಆಗ್ರಹಿಸಿ ಏ. 3ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಕೇಂದ್ರ ಹಾವೇರಿಯಲ್ಲಿ ರಸ್ತೆ ತಡೆ ನಡೆಸಲಿದೆ. ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲೂ ಮುಂದಾಗಿದೆ. ಈ ಕುರಿತು ತಾಲೂಕು ಘಟಕದ ಅಧ್ಯಕ್ಷ ರುದ್ರಗೌಡ ಕಾಡನಗೌಡ್ರ ಪ್ರಕಟಣೆ ನೀಡಿದ್ದು, ರೈತರ ಬೆಳೆವಿಮೆ ಮಂಜೂರು ಮಾಡುವುದು, ವಿದ್ಯುತ್ ವಿತರಣೆಯಲ್ಲಿ ಹೆಸ್ಕಾಂ ತಾರತಮ್ಯ, ಶಾಶ್ವತ ಬರಗಾಲ ಪರಿಹಾರಕ್ಕಾಗಿ ವರದಾ ಹಾಗೂ ತುಂಗಭದ್ರಾ ನದಿಯಿಂದ ಕೆರೆಗಳಿಗೆ ನೀರು ಒದಗಿಸಲು ಒತ್ತಾಯಿಸಲಾಗುವುದು. ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಆರ್.ವಿ. ಕೆಂಚಳ್ಳೇರ, ತಾಲೂಕು ಶಹರ ಘಟಕದ ಅಧ್ಯಕ್ಷ ಚಿಕ್ಕಪ್ಪ ಛತ್ರದ, ಉಪಾಧ್ಯಕ್ಷ ಕೆ.ವಿ. ದೊಡ್ಡಗೌಡ್ರ, ರಾಜ್ಯ ಸಮಿತಿ ಸದಸ್ಯ ಶಶಿಧರ ಛತ್ರದಮಠ, ಹಸಿರುಸೇನೆ ಅಧ್ಯಕ್ಷ ಗಂಗಣ್ಣ ಎಲಿ ನೇತೃತ್ವ ವಹಿಸಲಿದ್ದಾರೆ. ತಾಲೂಕಿನ ವಿವಿಧ ಗ್ರಾಮಘಟಕಗಳ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement