ಇಂದು ಎಸ್.ಆರ್. ಪಾಟೀಲ ಅಭಿಮಾನಿಗಳ ಸಭೆ
ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಏ. 7
ಕಾಂಗ್ರೆಸ್ ಮುಖಂಡ ಎಸ್.ಆರ್. ಪಾಟೀಲ ಅವರ ಅಭಿಮಾನಿಗಳ ಸಭೆಯನ್ನು ಎಪಿಎಂಸಿ ಪ್ರಾಂಗಣದಲ್ಲಿರುವ ಆರ್.ಜಿ. ಪಾಟೀಲ ಅವರ ಅಂಗಡಿಯಲ್ಲಿ ಏ. 8ರಂದು ಮಧ್ಯಾಹ್ನ 12 ಗಂಟೆಗೆ ಕರೆಯಲಾಗಿದೆ.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಸಕ್ತ ಹಾಗೂ ಮುಂದಿನ ವಿದ್ಯಮಾನಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು.
ಬ್ಯಾಡಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 118 ಗ್ರಾಮಗಳ ಎಸ್.ಆರ್. ಪಾಟೀಲ ಅಭಿಮಾನಿಗಳು ತಪ್ಪದೆ ಸಭೆಯಲ್ಲಿ ಪಾಲ್ಗೊಳ್ಳುವಂತೆ ಬಿ.ಪಿ. ಚನ್ನಗೌಡ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.