ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ದೇವಗಿರಿ: ಶಿವರಾಜ ಸಜ್ಜನರ ಪಾದಯಾತ್ರೆ ಮೂಲಕ ಪ್ರಚಾರ

Vishwanath S
Updated On : 9 Apr 2013, 10:49 am

ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಏ. 8
ಬ್ಯಾಡಗಿ ಮತಕ್ಷೇತ್ರದ ಕೆಜೆಪಿ ಅಭ್ಯರ್ಥಿ ಶಿವರಾಜ ಸಜ್ಜನ ಸೋಮವಾರ ದೇವಗಿರಿ ಗ್ರಾಮದಲ್ಲಿ ಮತ ಯಾಚನೆ ಮಾಡಿದರು. ರಾಜ್ಯದ ಸಮಗ್ರ ಅಭಿವೃದ್ಧಿಗೆ ಬಿ.ಎಸ್. ಯಡಿಯೂರಪ್ಪ ಅವರನ್ನು ಬೆಂಬಲಿಸಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಲು ಅವಕಾಶ ಕಲ್ಪಿಸಿಕೊಡುವಂತೆ ಮನವಿ ಮಾಡಿದರು.
ಎರಡು ದಶಕಗಳ ಕಾಲ ರಾಜಕೀಯ ಜೀವನದಲ್ಲಿ ಸಾಕಷ್ಟು ಸೇವೆಗೈದಿದ್ದು, ಗ್ರಾಮದಲ್ಲಿ ಎಂಜಿನೀಯರಿಂಗ್ ಕಾಲೇಜು ಸೇರಿದಂತೆ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಒದಗಿಸಲಾಗಿದೆ. ಸಮುದಾಯಗಳ ಏಳ್ಗೆಗೆ ಸಹಕಾರ ನೀಡಿರುವುದಾಗಿ ತಿಳಿಸಿದರು. ಮಾಜಿ ಮುಖ್ಯಮಂತ್ರಿ ಬಿಎಸ್‌ವೈ ಜಾತ್ಯತೀತ ತಳಹದಿಯಲ್ಲಿ ಅಧಿಕಾರ ನಡೆಸಿದ್ದಾರೆ. ಆದರೆ ಬಿಜೆಪಿಯ ಕೆಲವು ದುಷ್ಟ ನಾಯಕರ ಕುತಂತ್ರಕ್ಕೆ ಬಲಿಯಾಗಿ ಅಧಿಕಾರದಿಂದ ಕೆಳಗೆ ಇಳಿಯುವಂತಾಯಿತು. ಬಿಎಸ್‌ವೈ ಅಭಿವೃದ್ಧಿ ಚಿಂತನೆಗಳ ಮೂಲಕ ಜನಮನ ಗೆದ್ದಿದ್ದಾರೆ. ಅವರ ನಾಯಕತ್ವದಲ್ಲಿ ಕೆಜೆಪಿ ಬರುವ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಗಳಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಕೆಜೆಪಿ ಘಟಕ ಅಧ್ಯಕ್ಷ ಮುರಿಗೆಪ್ಪ ಶೆಟ್ಟರ, ರಾಜೇಂದ್ರ ಸಜ್ಜನರ, ಜಿಪಂ ಸದಸ್ಯ ರಾಜೇಂದ್ರ ಹಾವೇರಣ್ಣನವರ, ಎಪಿಎಂಸಿ ಸದಸ್ಯ ವಿರೂಪಾಕ್ಷಪ್ಪ ಕಡ್ಲಿ, ಗ್ರಾಪಂ ಅಧ್ಯಕ್ಷ ಬಸವಣ್ಣೆಪ್ಪ ಹೊಂಬರಡಿ, ಜಯಮ್ಮ ಅಂಗಡಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement