ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಭವಿಷ್ಯದ ರಾಷ್ಟ್ರಕ್ಕಾಗಿ ಮತಹಾಕಿ: ವಿ.ವಿ. ಸಾಲಿಮಠ

Vishwanath S
Updated On : 9 Apr 2013, 10:49 am

ಹಾನಗಲ್ಲ: ಪ್ರತಿ ಕುಟುಂಬಕ್ಕೆ ಮತದಾನದ ಮಹತ್ವ ತಿಳಿಸುವ ಮೂಲಕ ಭವ್ಯ ಭಾರತದ ಭವಿಷ್ಯ ನಿರ್ಮಾಣಕ್ಕೆ ಸಹಕಾರಿಯಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ಸಾಲಿಮಠ ಹೇಳಿದರು.
ಸೋಮವಾರ ಶಿಕ್ಷಣ ಇಲಾಖೆಯಿಂದ ಇಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಭಾ ಭವನದಲ್ಲಿ ತಾಲೂಕಿನ ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರಿಗಾಗಿ ಏರ್ಪಡಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮತದಾನ ಕಾರ್ಯಕ್ಕಾಗಿ ಎಲ್ಲ ಶಾಲಾ ಕೊಠಡಿಗಳನ್ನು ಸುವ್ಯವಸ್ಥಿತ ರೀತಿಯಲ್ಲಿ ಇಡಬೇಕು. ಅಗತ್ಯ ಸಿಬ್ಬಂದಿ ವರ್ಗ ಕೇಂದ್ರ ಸ್ಥಾನದಲ್ಲಿದ್ದು, ಮತದಾನ ಜಾಗೃತಿ ಕಾರ್ಯಕ್ರಮದ ಯಶಸ್ಸಿಗೆ ಮುಂದಾಗಬೇಕು ಎಂದು ಕಾರ್ಯಕ್ರದಮದಲ್ಲಿ ಭಾಗವಹಿಸಿದ್ದ ಶಾಲಾ ಮುಖ್ಯ ಶಿಕ್ಷಕರಿಗೆ ಸೂಚಿಸಿದರು. ಮುಖ್ಯ ಅತಿಥಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮನೋಜಕುಮಾರ ಗಡಬಳ್ಳಿ ಮಾತನಾಡಿ, ಸದೃಢ ದೇಶ ನಿರ್ಮಾಣಕ್ಕೆ ಮತದಾನ ಅಗತ್ಯವಾಗಿದ್ದು, ಪ್ರತಿಯೊಂದು ಕುಟುಂಬದ ಸದಸ್ಯರಿಗೆ ಕಡ್ಡಾಯ ಮತದಾನಕ್ಕಾಗಿ ಪ್ರೇರೆಪಿಸುವ ಕಾರ್ಯವಾಗಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲ ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರು, ಕ್ಷೇತ್ರ ಸಂಪನ್ಮೂಲ, ಸಮೂಹ ಸಂಪನ್ಮೂಲ ವ್ಯಕ್ತಿಗಳು ಹಾಜರಿದ್ದರು. ಸಮನ್ವಯಾಧಿಕಾರಿ ಸಿ.ಪಿ. ಮೂಲಿಮನಿ ಪ್ರಾಸ್ತಾವಿಕ ಮಾತನಾಡಿದರು. ಅಶೋಕ ಹನುಮಾಪುರ ಪ್ರತಿಜ್ಞಾವಿಧಿ ಬೋಧಿಸಿ ಕಾರ್ಯಕ್ರಮ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement