ಮತದಾನ ಅವಧಿ ಹೆಚ್ಚಳ
ಹಾವೇರಿ: ಮೇ 5ರಂದು ಜರುಗಲಿರುವ ವಿಧಾನಸಭಾ ಚುನಾವಣೆಯ ಮತದಾನದ ಅವಧಿಯನ್ನು ಬೆಳಗ್ಗೆ 7ರಿಂದ ಸಂಜೆ 5ರ ವರೆಗೆ ನಿಗದಿಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ವಿ. ಅನ್ಬುಕುಮಾರ ತಿಳಿಸಿದ್ದಾರೆ. ಮತದಾನದ ಅವಧಿ ಬೆಳಗ್ಗೆ 8ರಿಂದ ಸಂಜೆ 5ರ ವರೆಗೆ ಎಂದು ಆಯೋಗ ಈ ಮುಂಚೆ ಪ್ರಕಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಇದಕ್ಕೆ ಸಾಕಷ್ಟು ಪ್ರತಿರೋಧವೂ ವ್ಯಕ್ತವಾಗಿತ್ತು.