ವಿಶ್ವ ಆರೋಗ್ಯ ದಿನಾಚರಣೆ
ಕನ್ನಡಪ್ರಭ ವಾರ್ತೆ, ಹಾವೇರಿ, ಏ. 10
ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಇತ್ತೀಚೆಗೆ ಹಾವೇರಿ ಜಿಲ್ಲಾ ಆರೋಗ್ಯ ಭವನದಲ್ಲಿ ಜರುಗಿತು.
ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಬಿ.ಎಸ್. ಗೌಡರ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್. ರಾಘವೇಂದ್ರ ಅಧ್ಯಕ್ಷತೆ ವಹಿಸಿದ್ದರು.
ವಿಶ್ವ ಆರೋಗ್ಯ ಘೋಷಣೆ ರಕ್ತದೊತ್ತಡ ನಿಯಂತ್ರಿಸಿಕೊಳ್ಳಿ ಎಂಬ ವಿಷಯದ ಕುರಿತು ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಡಿ.ಬಿ. ಮೂಲಿ ಉಪನ್ಯಾಸ ನೀಡಿದರು.
ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು, ಜಿಲ್ಲೆಯ ಎಲ್ಲ ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಎಫ್. ಕುರವಳ್ಳಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಡಿ.ಸಿ. ಬೆಂಡಗೇರಿ ವಂದಿಸಿದರು.