ಶಿವರಾಜ ಸಜ್ಜನರ ನಾಮಪತ್ರ ಸಲ್ಲಿಕೆ
ಬ್ಯಾಡಗಿ: ಬ್ಯಾಡಗಿ ಮತಕ್ಷೇತ್ರದ ಕೆಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಪಟ್ಟಣದ ಶ್ರೀ ಸಿದ್ದೇಶ್ವರ ಕಲ್ಯಾಣ ಮಂಟಪದಿಂದ ತಹಸೀಲ್ದಾರ್ ಕಾರ್ಯಾಲಯದ ವರೆಗೆ ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು. ಮಾಜಿ ಶಾಸಕ ಸುರೇಶಗೌಡ್ರ ಪಾಟೀಲ, ತಾಲೂಕು ಕೆಜೆಪಿ ಘಟಕದ ಅಧ್ಯಕ್ಷ ಮುರಿಗೆಪ್ಪ ಶೆಟ್ಟರ, ರಾಜೇಂದ್ರ ಸಜ್ಜನ, ಚಂದ್ರಣ್ಣ ಶೆಟ್ಟರ ಉಪಸ್ಥಿತರಿದ್ದರು.